ನವದೆಹಲಿ: ರೈಲ್ವೆ ಮಂಡಳಿಯು ಗ್ರೂಪ್ ಡಿ ಹುದ್ದೆಗಳ ನೇಮಕಾತಿ ವಿದ್ಯಾರ್ಹತೆಯಲ್ಲಿ ಬದಲಾವಣೆ ಮಾಡಿದ್ದು, 3200 ಲೆವೆಲ್-1 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಹೊಸ ವಿದ್ಯಾರ್ಹತೆಯನ್ನು ಅನ್ವಯಿಸಿದೆ.
ಹೊಸ ನಿಯಮದ ಪ್ರಕಾರ, 10ನೇ ತರಗತಿ ಪಾಸಾಗಿರುವುದು ಅಥವಾ ಐಟಿಐ ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವುದು ಮತ್ತು ನ್ಯಾಷನಲ್ ಕೌನ್ಸಿಲ್ ಫಾರ್ ವೋಕೇಷನಲ್ ಟ್ರೈನಿಂಗ್ ನೀಡುವ ರಾಷ್ಟ್ರೀಯ ಅಪ್ರೆಂಟಿಷಿಪ್ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಜೊತೆಗೆ ರೈಲ್ವೆ ಶಿಕ್ಷಕರ ಹುದ್ದೆಗಳು ಸೇರಿದಂತೆ ಇತರ 1030 ಹುದ್ದೆಗಳ ನೇಮಕಾತಿಗೂ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 6 ರಂದು ಅರ್ಜಿ ಸಲ್ಲಿಸುವ ಕೊನೆಯ ದಿನವಾಗಿದೆ ಎಂದು ಮಾಹಿತಿ ನೀಡಲಾಗಿದೆ.ಇದನ್ನು ಓದಿ –HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
ಈ ಅವಕಾಶವನ್ನು ಬಳಸಿಕೊಳ್ಳಲು ಅರ್ಹ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ