ಕೋಲಾರ: ಮಾದಕ ವಸ್ತುಗಳ ವಿರುದ್ಧ ಪೊಲೀಸರಿಂದ ಕಠಿಣ ಕಾರ್ಯಾಚರಣೆ ಮುಂದುವರಿಯುತ್ತಿದೆ. ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೋಲಾರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಮೀರ್ ಪಾಷಾ, ತಮೀಮ್ ಖಾನ್ ಮತ್ತು ಷಹೀದ್ ಪಾಷಾ ಎಂದು ಗುರುತಿಸಲಾಗಿದೆ. ಅವರಿಂದ 20,000 ರೂ. ಮೌಲ್ಯದ 5.4 ಗ್ರಾಂ ಎಂಡಿಎಂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು, ಒಂದು ಮಾರುತಿ ಸ್ವಿಫ್ಟ್ ಕಾರು, 4 ಮೊಬೈಲ್ ಫೋನ್ ಹಾಗೂ 1 ಡ್ರಾಗರ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.ಇದನ್ನು ಓದಿ –ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
ಕೋಲಾರ ನಗರ ವ್ಯಾಪ್ತಿಯ ಸುಲ್ತಾನ್ ತಿಪ್ಪಸಂದ್ರ ಬಳಿ ಈ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು