March 10, 2026

Newsnap Kannada

The World at your finger tips!

police 1

KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

Spread the love

ಕೋಲಾರ: ತಮಿಳುನಾಡಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ತಮಿಳುನಾಡಿನ ರಾಣಿಪೇಟೆ ಬಳಿ ನಡೆದ ಈ ಭೀಕರ ಅಪಘಾತದಲ್ಲಿ KSRTC ಬಸ್ ಮತ್ತು ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕ್ಯಾಂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮತ್ತು ಬಸ್‌ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಪೋಷ್ಮಿಕರ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.ಇದನ್ನು ಓದಿ – ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ

ಈ ಭೀಕರ ಅಪಘಾತವು ಸ್ಥಳೀಯರಿಗೆ ಮತ್ತು ಮೃತರ ಕುಟುಂಬಗಳಿಗೆ ಆಘಾತವನ್ನುಂಟುಮಾಡಿದೆ.

error: Content is protected !!