ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವರ ಸ್ವಪಕ್ಷದಲ್ಲೇ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ಬಿಜೆಪಿ ಕಾರ್ಯಕರ್ತರು, ಪ್ರತಾಪ್ ಸಿಂಹ ಅವರ ವಿರುದ್ಧ ಕಿಡಿ ಕಾರಿದ್ದು, ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲು ಆಗ್ರಹಿಸಿ ಪತ್ರ ಬರೆದಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪ
ಪ್ರತಾಪ್ ಸಿಂಹ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮೈಸೂರು ನಗರಾಧ್ಯಕ್ಷ ಎಲ್. ನಾಗೇಂದ್ರ ಮತ್ತು ಗ್ರಾಮಾಂತರ ಅಧ್ಯಕ್ಷ ಮಹದೇವಸ್ವಾಮಿ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಲಾಗಿದೆ. ಚಾಮರಾಜ ಕ್ಷೇತ್ರದ ಮಾಜಿ ಉಪಾಧ್ಯಕ್ಷ ಕುಮಾರ್ ಗೌಡ ಮತ್ತು ಪರಿಶಿಷ್ಟ ಪಂಗಡಗಳ ಮೋರ್ಚಾದ ಮಾಜಿ ಅಧ್ಯಕ್ಷ ಮೈ.ಕಾ ಪ್ರೇಮ್ ಕುಮಾರ್ ಈ ಪತ್ರಕ್ಕೆ ಸಹಿ ಹಾಕಿದ್ದು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಲಾಗಿದೆ.
ಹಾಲಿ ಸಂಸದರಿಗೆ ಮುಜುಗರ ತಂದ ಆರೋಪ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ, ಪಕ್ಷದ ಆಧಿಕೃತ ಪ್ರಚಾರದಲ್ಲಿ ತೊಡಗಿಸಿಕೊಳ್ಳದೆ ಕೇವಲ ವರುಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಸೋಲಿಗೆ ಕಾರಣರಾದರು ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ವಕ್ಫ್ ವಿಷಯದಲ್ಲಿ ಪಕ್ಷದ ಬ್ಯಾನರ್ ಅಡಿಯಲ್ಲಿ ಹೋರಾಟ ಮಾಡದೆ ಪಕ್ಷದ ನಾಯಕರಿಗೆ ಮುಜುಗರ ತಂದರು ಎಂದು ಆರೋಪಿಸಲಾಗಿದೆ.
ಸಿದ್ದರಾಮಯ್ಯ ಪರ ನಿಲುವು
ಮೈಸೂರಿನಲ್ಲಿರುವ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದರೆ, ಪ್ರತಾಪ್ ಸಿಂಹ ಮಾತ್ರ ಇದನ್ನು ಸಮರ್ಥಿಸಿಕೊಂಡರು. ಈ ಮೂಲಕ ಪಕ್ಷದ ಒಳಗೆ ಅಸಮಾಧಾನಕ್ಕೆ ಕಾರಣವಾದರು.
ಕಾಂಗ್ರೆಸ್ ಸೇರುವ ಊಹಾಪೋಹ
ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಸೇರುವ ಬಗ್ಗೆ ಹಲವು ಊಹಾಪೋಹಗಳು ಹರಡಿದರೆ, ಇದಕ್ಕೆ ಸ್ಪಷ್ಟನೆ ನೀಡಿದ ಅವರು, ‘ಬಿಜೆಪಿ ಬಿಟ್ಟು ನಾನು ಕಾಂಗ್ರೆಸ್ ಸೇರುವ ಅನಿವಾರ್ಯತೆ ಇಲ್ಲ’ ಎಂದರು.ಇದನ್ನು ಓದಿ –ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಯತ್ನಾಳ್ ಬಣದ ಸದಸ್ಯರ ಮೇಲೆ ಆರೋಪ
ವಕ್ಫ್ ಕುರಿತ ಹೋರಾಟದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಣದೊಂದಿಗೆ ಕೈಜೋಡಿಸಿರುವುದಾಗಿ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಹಿಂದೆ ಹಲವು ಬಾರಿ ಪಕ್ಷದ ಒಳಗೆ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ಕೇಳಿಬಂದಿದೆ.
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ