ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ ಮತ್ತು ಶೀತಗಾಳಿ ಮುಂದುವರಿದಿರುವಾಗ, ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದ್ದು, ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಆಗಿ ದಾಖಲಾಗಿದೆ. ಇದರಿಂದ ಚಳಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.
ಈ ನಡುವೆ, ಚಿಕ್ಕಮಗಳೂರಿನ ಶೃಂಗೇರಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿಯೂ ಮಳೆ ಪ್ರವೃತ್ತಿ ಮುಂದುವರಿಯಲಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ, ಆಗಾಗ ಬಿಸಿಲು-ನೆರಳಿನ ಆಟ ಕಂಡುಬರುತ್ತಿದ್ದು, ಚಳಿಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ.ಇದನ್ನು ಓದಿ –ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
ಅದರೆ, ತುಮಕೂರು, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಬಾಗಲಕೋಟೆ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್, ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
More Stories
ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ