January 15, 2025

Newsnap Kannada

The World at your finger tips!

leopard infosys

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಹುಡುಕಾಟ ಸ್ಥಗಿತ

Spread the love

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಇರುವಿಕೆ ಬಗ್ಗೆ ಯಾವುದೇ ರೀತಿಯ ಪ್ರತ್ಯಕ್ಷ ಅಥವಾ ಪರೋಕ್ಷ ಕುರುಹುಗಳು ಕಂಡು ಬಾರದೇ ಇರುವುದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಈ ವಿಷಯ ಪ್ರಕಟಿಸಿದ ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದ ಬಿ ಬಸವರಾಜ್‌ , ರಾತ್ರಿ ವೇಳೆ ಥರ್ಮಲ್ ಡ್ರೋನ್ ಬಳಸಿ ಕ್ಯಾಂಪಸ್ ನಲ್ಲಿ ನಿರಂತರ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 10 ದಿನಗಳಿಂದ ಇಲ್ಲಿಯವರೆಗೂ ಕ್ಯಾಮೆರಾ ಟ್ರ್ಯಾಪ್​​ಗಳಲ್ಲಿ ಆಗಲಿ, ಡ್ರೋನ್ ಕ್ಯಾಮೆರಾ, ಕ್ಯಾಂಪಸ್ ನಲ್ಲಿರುವ ಸಿಸಿಟಿವಿ ಕ್ಯಾಮರಾಗಳಲ್ಲಿ ಆಗಲಿ ,ಕೊಂಬಿಂಗ್​ ಕಮ್​ ಸರ್ಚ್​​​​​ ನಲ್ಲಿಯಾಗಲಿ, ಯಾವುದೇ ಚಲನವಲನಗಲಾಗಲೀ, ಹೆಜ್ಜೆ ಗುರುತು ಅಥವಾ ಯಾವುದೇ ರೀತಿಯ ಚಿರತೆ ಇರುವಿಕೆಯ ಕುರುಹುಗಳ ಬಗ್ಗೆ 10 ದಿನಗಳ ಕಾರ್ಯಾಚರಣೆಯಲ್ಲಿ ಕಂಡು ಬಂದಿರುವುದಿಲ್ಲ.ಇದನ್ನು ಓದಿ – ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್‌ ಹಾಗೂ ಭರ್ಜರಿ ಗೆಲುವು

ಹೀಗಾಗಿ ಸರ್ಚಿಂಗ್ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!