ಬೆಂಗಳೂರು: ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಕುರಿತು ವದಂತಿ ಹರಡುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ತಳ್ಳಿ ಹಾಕಿದ್ದಾರೆ. ‘ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ’ ಎಂದು ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಕ್ಲೀನ್ ಚಿಟ್ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ನನಗೆ ಈ ಬಗ್ಗೆ ಗೊತ್ತಿಲ್ಲ,’ ಎಂದು ಸ್ಪಷ್ಟಪಡಿಸಿದ ಸಿಎಂ, ಬಜೆಟ್ ತಯಾರಿಯ ಕಾರಣದಿಂದ ದಾವೋಸ್ ನಲ್ಲಿ ನಡೆಯುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾಗವಹಿಸದಿರುವುದಾಗಿ ತಿಳಿಸಿದ್ದಾರೆ.ಇದನ್ನು ಓದಿ -ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ: ಹೆಚ್ ವಿಶ್ವನಾಥ್
ಡಿ.ಕೆ.ಶಿವಕುಮಾರ್ ಬಗ್ಗೆ ಸಿಎಂ ಪ್ರತಿಕ್ರಿಯೆ:
ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಕೂಗು ಹಾಗೂ ಈ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ‘ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ,’ ಎಂದು ಹೇಳಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು