ನಂಜನಗೂಡು :ಸಾರಿಗೆ ಬಸ್ – ಟಿಪ್ಪರ್ ನಡುವಿನ ಓವರ್ಟೇಕ್ ಮಾಡುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮಹಿಳಾ ಪ್ರಯಾಣಿಕರ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.
ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ.
ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು.
ಈ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಮಹಿಳೆಯು ಬಸ್ನ ಕಿಟಕಿಯಿಂದ ಕತ್ತನ್ನು ಹೊರಹಾಕಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾಗಿದೆ.
ಇದನ್ನು ಓದಿ -ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
ಈ ಪರಿಣಾಮ ಶಿವಲಿಂಗಮ್ಮ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು