ಜನವರಿ 30ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜನವರಿ 31 ಮತ್ತು ಫೆಬ್ರವರಿ 1ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಕೋಲಾರ, ಬೆಂಗಳೂರು, ಚಾಮರಾಜನಗರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ತೀವ್ರ ಮಳೆಯಾಗಲಿದ್ದು, ಜನತೆಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಚಳಿಯ ಪ್ರಮಾಣ ಹೆಚ್ಚಳ
ಪ್ರಸ್ತುತ ರಾಜ್ಯದ ಒಳನಾಡಿನಲ್ಲಿ ಚಳಿಯ ತೀವ್ರತೆ ಏರಿಕೆಯಾಗುತ್ತಿದ್ದು, ಉತ್ತರ ಒಳನಾಡಿನ ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ 11.8 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾವೇರಿಯಲ್ಲಿ 12 ಡಿಗ್ರಿ, ಬೀದರ್‌ನಲ್ಲಿ 13 ಡಿಗ್ರಿ, ಗದಗದಲ್ಲಿ 13.4 ಡಿಗ್ರಿ, ಬೆಂಗಳೂರಿನಲ್ಲಿ 14 ಡಿಗ್ರಿ, ರಾಯಚೂರಿನಲ್ಲಿ 15 ಡಿಗ್ರಿ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಇದನ್ನು ಓದಿ –ಮೈಸೂರು: ಮೈಕ್ರೋ ಫೈನಾನ್ಸ್ ಸಾಲದ ಬಾಧೆಯಿಂದ ಮಹಿಳೆ ಆತ್ಮಹತ್ಯೆ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ತೀವ್ರ ಚಳಿಯ ವಾತಾವರಣ ಇರುತ್ತದೆ. ದಕ್ಷಿಣ ಒಳನಾಡಿನಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಚಳಿಯ ವಾತಾವರಣ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು