ಮಂಡ್ಯ: ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ವಿಸಿ ನಾಲೆಗೆ ಬಿದ್ದು ಸಂಭವಿಸಿದ ದುರಂತದಲ್ಲಿ ಮತ್ತೊಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂವರಿಗೆ ಏರಿದೆ.
ತಿಬ್ಬನಹಳ್ಳಿಯ ಬಳಿ ಇರುವ ವಿಸಿ ನಾಲೆಯಲ್ಲಿ ಪೀರ್ ಖಾನ್ ಎಂಬುವವರ ಶವ ಪತ್ತೆಯಾಗಿದ್ದು, ಅವರು ಮಂಡ್ಯ ಜಿಲ್ಲೆಯ ಹಾಲಹಳ್ಳಿ ಸ್ಲಂ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ -ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ: ಎಫ್‌ಐಆರ್ ದಾಖಲು
ಈ ದುರಂತದಲ್ಲಿ ಸಾವಿನ ಸಂಖ್ಯೆ ಈಗ ಮೂರು ಆದ್ದರಿಂದ ಸ್ಥಳೀಯರು ಮತ್ತು ಕುಟುಂಬದ ಸದಸ್ಯರಲ್ಲಿ ಆಘಾತ ಮೂಡಿಸಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರೆಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು