ತೀವ್ರ ಸ್ವರೂಪ ಪಡೆದುಕೊಂಡ ರೈತರ ‘ದೆಹಲಿ ಚಲೋ’ಪ್ರತಿಭಟನೆ!

Team Newsnap
0 Min Read

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ಶುಕ್ರವಾರ ಕೂಡ ಮುಂದುವರಿದಿದ್ದು ರೊಹ್ಟಕ್-ಜ್ಹಜ್ಜರ್ ಗಡಿಯಲ್ಲಿ ಇಂದು ಬೆಳಗ್ಗೆಯೇ ರೈತರು ಜಮಾಯಿಸಿದ್ದಾರೆ.

ರೈತರ ಪ್ರತಿಭಟನೆ ಮಧ್ಯೆ ಹರ್ಯಾಣ-ದೆಹಲಿ ಗಡಿಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿಂಘು ಗಡಿಯತ್ತ ವಾಹನಗಳು ಸಂಚರಿಸಲು ಪೊಲೀಸರು ಬಿಡುತ್ತಿಲ್ಲ. ಅಂತರಾಜ್ಯ ವಾಹನಗಳು ಪೂರ್ವ ಮತ್ತು ಪಶ್ಚಿಮ ಫೆರಿಫೆರಲ್ ಎಕ್ಸ್ ಪ್ರೆಸ್ ವೇ ಮೂಲಕ ಸಂಚಾರ ನಡೆಸಬಹುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಇಂದು ಕೂಡ ಹರ್ಯಾಣ ದೆಹಲಿಯ ಗಡಿಯಲ್ಲಿ ಜಮಾಯಿಸಿದ ಪ್ರತಿಭಟನಾ ನಿರತ ರೈತರತ್ತ ಪೊಲೀಸರು ಅಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಲು ನೋಡುತ್ತಿದ್ದಾರೆ. 

Share This Article
Leave a comment