ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ಕಾಮಗಾರಿಯೊಂದಿಗೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ.
ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ದಟ್ಟಣೆ ಹೆಚ್ಚಿರುವ ಪ್ರದೇಶಗಳನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬಿಎಂಆರ್‌ಸಿಎಲ್ ಎಂಡಿ ಮಹೇಶ್ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಗರದ ಹೆಬ್ಬಾಳ, ಕುವೆಂಪು ಸರ್ಕಲ್, ಗೊರಗುಂಟೆ ಪಾಳ್ಯ, ಸುಮ್ಮನಹಳ್ಳಿ ಮತ್ತು ನಾಯಂಡಹಳ್ಳಿ ಜಂಕ್ಷನ್‌ಗಳಿಗೆ ಭೇಟಿ ನೀಡಿ ಟ್ರಾಫಿಕ್ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಹೆಬ್ಬಾಳದಿಂದ ಜೆಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗದ ಬ್ಲೂಪ್ರಿಂಟ್ ಕುರಿತಂತೆ ಸ್ಥಳದಲ್ಲಿಯೇ ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ, ಮುಂದಿನ 40 ವರ್ಷಗಳ ಬೃಹತ್ ಬೆಂಗಳೂರು ಪರಿಕಲ್ಪನೆಯೊಂದಿಗೆ, ಮೆಟ್ರೋ ಕಾಮಗಾರಿ ನಡೆಯುವ ಪ್ರತಿಯೊಂದು ಸ್ಥಳದಲ್ಲೂ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ಸೂಚಿಸಿದರು.ಇದನ್ನು ಓದಿ –ಮಳವಳ್ಳಿಯಲ್ಲಿ ಲಂಚ ಸ್ವೀಕಾರ
ಈ ಯೋಜನೆ ಕಾರ್ಯಗತಗೊಳ್ಳಲು ಹೆಚ್ಚುವರಿಯಾಗಿ ₹9,800 ಕೋಟಿ ವೆಚ್ಚವಾಗಲಿದ್ದು, ಇದನ್ನು ಬಿಬಿಎಂಪಿ ಹಾಗೂ ಬೆಂಗಳೂರು ಮೆಟ್ರೋ ಒದಗಿಸುವಂತೆ ನಿರ್ದೇಶನ ನೀಡಲಾಗಿದೆ. ಇದರಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ತಗ್ಗಿಸುವ ವಿಶ್ವಾಸವನ್ನು ಡಿಕೆ ಶಿವಕುಮಾರ್ ವ್ಯಕ್ತಪಡಿಸಿದರು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು