- ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಯಾರಾಗಿದೆ. ಶೀಘ್ರದಲ್ಲೇ ಟೋಲ್ ದರ ಇಳಿಕೆಯಾಗಲಿದ್ದು, ಸರ್ಕಾರ ಹೊಸ ಏಕರೂಪದ ಟೋಲ್ ನೀತಿ ತರಲು ಯೋಜನೆ ರೂಪಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶುಕ್ರವಾರ ತಿಳಿಸಿದರು.
ಗಡ್ಕರಿ ನೀಡಿದ ಸಂದರ್ಶನದಲ್ಲಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಟೋಲ್ ನೀತಿ ಪರಿಷ್ಕರಣೆ ಸಂಬಂಧ ಸಂಶೋಧನೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಹೊಸ ಯೋಜನೆಯನ್ನು ಪ್ರಕಟಿಸಲಾಗುವುದು ಎಂದರು.
ಇದೇ ವೇಳೆ, ಸರ್ಕಾರ ಜಾಗತಿಕ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೊಳಿಸಲು ಕೆಲಸ ಮಾಡುತ್ತಿದೆ. ಈ ಹೊಸ ವ್ಯವಸ್ಥೆಯಿಂದ ಹೆದ್ದಾರಿಗಳಲ್ಲಿನ ಟೋಲ್ ಬೂತ್‌ಗಳ ಅಗತ್ಯ ಕಡಿಮೆಯಾಗುತ್ತಿದ್ದು, ವಾಹನ ಸಂಚಾರ ಹೆಚ್ಚು ಸುಗಮಗೊಳ್ಳಲಿದೆ ಎಂದು ಗಡ್ಕರಿ ವಿವರಿಸಿದರು.
ಸಮಾಜಿಕ ಮಾಧ್ಯಮಗಳಲ್ಲಿ ಟೋಲ್ ಸಂಗ್ರಹದ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಕುರಿತಾಗಿ ಅವರು ಪ್ರತಿಕ್ರಿಯಿಸಿ, “ಅನೇಕರು ನನ್ನನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡುತ್ತಾರೆ. ಜನರು ಟೋಲ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕೆಲವೇ ದಿನಗಳಲ್ಲಿ ಈ ಅಸಮಾಧಾನ ಇಲ್ಲವಾಗಲಿದೆ” ಎಂದು ಭರವಸೆ ನೀಡಿದರು.ಇದನ್ನು ಓದಿ –ಗೃಹಲಕ್ಷ್ಮಿ ಯೋಜನೆ ಹಣ ಪಾವತಿ ವಿಧಾನದಲ್ಲಿ ಬದಲಾವಣೆ: ಇನ್ನು ಮುಂದೆ ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆ
ಭಾರತವು ವಿಶ್ವದ ಎರಡನೇ ಅತಿದೊಡ್ಡ ರಸ್ತೆ ಜಾಲವನ್ನು ಹೊಂದಿದ್ದು, ದೇಶದ ರಾಷ್ಟ್ರೀಯ ಹೆದ್ದಾರಿಗಳು 1,46,195 ಕಿಮೀ ಉದ್ದವನ್ನು ವ್ಯಾಪಿಸುತ್ತವೆ. 2023-24ರಲ್ಲಿ ದೇಶದ ಒಟ್ಟಾರೆ ಟೋಲ್ ಸಂಗ್ರಹ 64,809 ಕೋಟಿ ರೂಪಾಯಿ ದಾಖಲಾಗಿದ್ದು, ಇದು ಹಿಂದಿನ ವರ್ಷದಷ್ಟರಿಗಿಂತ ಶೇ 35 ಹೆಚ್ಚಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು