ಮೈಸೂರು: ಅವಹೇಳನಕಾರಿ ಪೋಸ್ಟ್ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಕಲ್ಲು ತೂರಾಟ ನಡೆಸಿದೆ.
ಈ ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ ಮತ್ತು 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಹಾನಿಗೊಳಗಾಗಿವೆ.
ಘಟನೆಯಲ್ಲಿ ಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್‌ಸ್ಪೆಕ್ಟರ್ ಮಹದೇವಸ್ವಾಮಿ ಸೇರಿದಂತೆ 14 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.ಇದನ್ನು ಓದಿ -ಭಾರತೀಯ ಗ್ರಂಥಾಲಯ ಪಿತಾಮಹ -ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್
ಅವರಾಹತಿಗೆ ಒಳಗಾದ ವಾಹನಗಳಿಗೂ ಹಾನಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಅಧಿಕಾರಿಗಳು ಶಾಂತಿ ಕಾಪಾಡಲು ಜನತೆಗೆ ಮನವಿ ಮಾಡಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು