ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಭಕ್ತಾದಿಗಳ ಜೇಬಿಗೆ ಕತ್ತರಿ

Team Newsnap
1 Min Read

ಕೊರೊನಾ ಸಾಂಕ್ರಾಮಿಕದ ಕಾರಣದಿಂದಾಗಿ ವ್ಯಾಪಾರ ವಹಿವಾಟು ಕುಸಿದಿದೆ. ಈ ಸಂದರ್ಭದಲ್ಲಿ ಜನರಿಗೆ ಆರ್ಥಿಕ ಹೊರೆ ಆಗದಂತೆ ಸರ್ಕಾರ ಕೆಲಸ ಮಾಡಬೇಕಿದೆ. ಆದರೆ ಇದೀಗ ಹೊಸದಾಗಿ ಶುಲ್ಕ ವಿಧಿಸುವ ಮೂಲಕ ಸರ್ಕಾರಿ ಸಂಸ್ಥೆಯೇ ಹಣ ಸುಲಿಗೆಗೆ ಮುಂದಾಗಿದೆ.

ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳುವಾಗ ವಾಹನವನ್ನೇನಾದರೂ ಕೊಂಡೊಯ್ದರೆ ನಿಮ್ಮ ಜೇಬಿಗೆ ಕತ್ತರಿ ಬೀಳಲಿದೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಹೊಸದಾಗಿ ಪಾರ್ಕಿಂಗ್ ಶುಲ್ಕ ವಿಧಿಸಲಾಗುತ್ತಿದೆ.

ಚಾಮುಂಡಿ ಬೆಟ್ಟದಲ್ಲಿ ಹೊಸದಾಗಿ ವಾಹನ ನಿಲುಗಡೆ ಶುಲ್ಕವನ್ನು ನಿಗದಿ ಮಾಡಲಾಗಿದೆ. ಕಾರು, ಬೈಕ್, ಟಿ.ಟಿ ವಾಹನಗಳ ನಿಲುಗಡೆಗೆ ಶುಲ್ಕ ವಿಧಿಸಲಾಗುತ್ತಿದೆ. ಬಹುಮಹಡಿ ಪಾರ್ಕಿಂಗ್ ಕಟ್ಟಡದಲ್ಲಿ ನಿಲುಗಡೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯಿಂದಲೇ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈ ಶುಲ್ಕದಿಂದ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಾಯಿಯ ದರ್ಶನಕ್ಕೆ ಬರುವ ಪ್ರವಾಸಿಗರಿಗೆ ಮತ್ತಷ್ಟು ಹೊರೆಯಾಗಲಿದೆ.

ಈ ಹಿಂದೆ ಉಚಿತವಾಗಿ ನಿಲುಗಡೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಕಾರಿಗೆ 40 ರೂ, ಬಸ್ಸಿಗೆ 100 ರೂ ನಿಗದಿ ಮಾಡಲಾಗಿದೆ. ಬೆಟ್ಟದ ನಿವಾಸಿಗಳನ್ನು ಹೊರತು ಪಡಿಸಿ ಎಲ್ಲರಿಗೂ ನಿಲುಗಡೆ ಶುಲ್ಕ ಕಡ್ಡಾಯ ಎನ್ನಲಾಗಿದೆ. ಇದು ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ಈ ಶುಲ್ಕವನ್ನು ರದ್ದು ಮಾಡಬೇಕು ಎಂದು ಭಕ್ತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Share This Article
Leave a comment