ಬೆಳಗಾವಿ: ರಾಜ್ಯ ಸರ್ಕಾರ ಜಾರಿ ಮಾಡಿರುವ ಗೃಹಲಕ್ಷ್ಮೀ ಯೋಜನೆಯಡಿ ಮನೆಗಳ ಯಜಮಾನಿಯರಿಗೆ ತಿಂಗಳಿಗೆ ₹2,000 ನೀಡಲಾಗುತ್ತಿದೆ. ಆದರೆ ಕಳೆದ 2-3 ತಿಂಗಳ ಹಣ ಇನ್ನೂ ಲಭಿಸಿಲ್ಲ ಎಂಬ ಕಾರಣದಿಂದ ಫಲಾನುಭವಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು, ಶೀಘ್ರವೇ 3 ತಿಂಗಳ ಹಣವನ್ನು ಒಂದೇ ಬಾರಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಅವರು ಈ ಕುರಿತು ಮಾತನಾಡಿ, “ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ ಖಾತೆಗೆ ಬಂದಿಲ್ಲ ಎಂಬ ದೂರುಗಳು ಬಂದಿವೆ. ಆದರೆ ಯಾರೂ ಆತಂಕಪಡುವ ಅಗತ್ಯವಿಲ್ಲ, ಶೀಘ್ರದಲ್ಲೇ ಬಾಕಿಯಿದ್ದ 3 ತಿಂಗಳ ಹಣವನ್ನು ಒಟ್ಟಿಗೆ ಜಮೆ ಮಾಡಲಾಗುವುದು” ಎಂದು ಹೇಳಿಕೆ ನೀಡಿದ್ದಾರೆ.
ಹಣ ಹಂಚಿಕೆ ಸಂಬಂಧ ಸಚಿವರು ಮಾಹಿತಿ ನೀಡಿದ್ದು, ಈ ಮೊದಲು ಅನುಸರಿಸಿದ್ದ ವಿಧಾನವೇ ಮುಂದುವರೆಯಲಿದೆ. ಜಿಲ್ಲಾ ಉಪನಿರ್ದೇಶಕರ ಮೂಲಕ ಹಣ ಲಭಿಸಲಿದೆ. ಇದನ್ನು ಓದಿ –ಸರ್ವೆಯರ್ ಆತ್ಮಹತ್ಯೆ ಪ್ರಕರಣ – ಹನಿಟ್ರ್ಯಾಪ್ ಗೆ ಬಲಿ ?
ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ಆಗಿದ್ದು, ನಂತರ ಉಪನಿರ್ದೇಶಕರ ಮೂಲಕ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು