ಈ ದುರ್ಘಟನೆ ಮಧ್ಯಪ್ರದೇಶದ ಜಬಲ್ಪುರ್ ಪೆಹರಾ ಟೋಲ್ ನಾಕಾ ಬಳಿ ಇಂದು ಮುಂಜಾನೆ ಸಂಭವಿಸಿದೆ. ಕ್ರೂಸರ್ ವಾಹನವು ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ವಿವರ
ಗೋಕಾಕ್ ನಗರದಿಂದ 10 ಮಂದಿ ಎರಡು ದಿನಗಳ ಹಿಂದೆ ಕ್ರೂಸರ್ ವಾಹನದಲ್ಲಿ ಮಹಾ ಕುಂಭಮೇಳಕ್ಕೆ ಹೊರಟಿದ್ದರು. ಇಂದು ಮುಂಜಾನೆ, ಮಧ್ಯಪ್ರದೇಶದ ಜಬಲ್ಪುರ್ ಸಮೀಪ ಸಾರಿಗೆ ಬಸ್‌ಗೆ ಅವರ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಏಳು ಜನರು ತಕ್ಷಣವೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.ಇದನ್ನು ಓದಿ –ಬಿಬಿಎಂಪಿ ಮಹಿಳಾ ನೌಕರಿಯ ಆತ್ಮಹತ್ಯೆ: ಕಿರುಕುಳವೇ ಕಾರಣ?
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಿಕಿತ್ಸೆ ಮುಂದುವರಿದಿದೆ. ಅಪಘಾತ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು