ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) SSLC ಮತ್ತು PUC ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಒದಗಿಸಿದೆ.
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪ್ರಯಾಣಿಸಲು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, KSRTCನ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಈ ಸೇವೆಯು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದು ಜಾರಿಗೆ ತರಲಾಗಿದ್ದು, ಪರೀಕ್ಷಾ ದಿನಗಳಲ್ಲಿ ಮಾತ್ರ ಲಭ್ಯವಾಗಲಿದೆ.ಇದನ್ನು ಓದಿ –ಹಸಿರು ಬಟಾಣಿಯಿಂದ ಕ್ಯಾನ್ಸರ್ ಅಪಾಯ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ!
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಸ್ಥಳೀಯ KSRTC ಕಚೇರಿಯನ್ನು ಸಂಪರ್ಕಿಸಬಹುದು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು