ಬೆಂಗಳೂರು: 2025-26ನೇ ಸಾಲಿನಲ್ಲಿ 40,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ (Excise Department) ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು.
ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, 2024-25ರ ಪರಿಷ್ಕೃತ ಅಂದಾಜಿನ ಪ್ರಕಾರ, ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ. ರಾಜಸ್ವ ಸಂಗ್ರಹಿಸುವ ನಿರೀಕ್ಷೆಯಿದೆ. ಇದನ್ನೇಕೊಂಡು, 2025-26ನೇ ಸಾಲಿಗೆ 40,000 ಕೋಟಿ ರೂ. ರಾಜಸ್ವ ಸಂಗ್ರಹಣಾ ಗುರಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರೀಮಿಯಂ ಮದ್ಯದ ದರ ಪರಿಷ್ಕರಣೆ
ಸರ್ಕಾರವು ಪ್ರೀಮಿಯಂ ಮದ್ಯದ ಬೆಲೆಗಳನ್ನು ನೆರೆಯ ರಾಜ್ಯಗಳ ದರಗಳಿಗೆ ಅನುಗುಣವಾಗಿ ಪರಿಷ್ಕರಿಸಲು ನಿರ್ಧರಿಸಿದೆ. ಇದನ್ನು ಅನುಸರಿಸಿ, ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸಲಾಗಿದೆ. 2025-26ರಲ್ಲಿ ಈ ತಿದ್ದುಪಡಿ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು.
ಪಾರದರ್ಶಕ ಇ-ಹರಾಜು ಮತ್ತು ಆನ್‌ಲೈನ್ ಸೇವೆಗಳು
ಖಾಲಿ ಅಥವಾ ಲಭ್ಯವಿರುವ ಮದ್ಯ ಪರವಾನಗಿಗಳನ್ನು ಪಾರದರ್ಶಕ ಇ-ಹರಾಜು (ಆನ್‌ಲೈನ್) ಮೂಲಕ ಹಂಚಿಕೆ ಮಾಡುವ ಯೋಜನೆ ತಂದು, ಇದರಿಂದ ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆಯಿದೆ.ಇದನ್ನು ಓದಿ –ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಹೆಸರು ಘೋ
ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳಿಗಾಗಿ ಸರ್ಕಾರ ತಂತ್ರಾಂಶ ಅಭಿವೃದ್ಧಿಪಡಿಸಿದ್ದು, ಎಲ್ಲಾ ಪ್ರಕ್ರಿಯೆಗಳು ಆನ್‌ಲೈನ್ ವ್ಯವಸ್ಥೆಗೆ ಪರಿವರ್ತನೆಯಾಗಲಿದೆ. ಇದು ಆಡಳಿತದ ದಕ್ಷತೆಯನ್ನು ಹೆಚ್ಚಿಸುವ ಜೊತೆಗೆ ಸಾರ್ವಜನಿಕ ಸೇವೆಗಳ ಗುಣಮಟ್ಟವನ್ನು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು