ಈ ನಡುವೆ, ಹವಾಮಾನ ಇಲಾಖೆ ರಾಜ್ಯದ ಜನತೆಗೆ ಉತ್ತಮ ಸುದ್ದಿಯೊಂದನ್ನು ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗಿದೆ.
ಮಾರ್ಚ್ 12 ರಿಂದ 14ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಮತ್ತು ಹಗಲು ವೇಳೆಯಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಇದನ್ನು ಓದಿ –ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಅದೇ ರೀತಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು