April 26, 2025

Newsnap Kannada

The World at your finger tips!

darshan

ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

Spread the love
  • ‘ಡೆವಿಲ್’ ಚಿತ್ರೀಕರಣದಲ್ಲಿ ಬಾಗಿ

ಮೈಸೂರು: ನಟ​ ದರ್ಶನ್ ಬುಧವಾರ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಧಕ್ಕೆ ನಿಂತಿದ್ದ ‘ಡೆವಿಲ್’​ ಸಿನಿಮಾದ ಚಿತ್ರೀಕರಣದಲ್ಲಿ ಮತ್ತೆ ಪಾಲ್ಗೊಂಡರು.

ಹತ್ತು ತಿಂಗಳ ಹಿಂದೆ ಮೈಸೂರಿನಲ್ಲಿ ಡೆವಿಲ್​ ಶೂಟಿಂಗ್​ನಲ್ಲಿದ್ದ ಸಮಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಅವರು ಜೈಲು ಸೇರಿದ್ದರು.

ಈ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಇದೀಗ ಮತ್ತೆ ಮೈಸೂರಿನಿಂದಲೇ ಚಿತ್ರೀಕರಣ ಆರಂಭವಾಗಿದೆ.

ಚಾಮುಂಡೇಶ್ವರಿಯ ಭಕ್ತರಾಗಿರುವ ದರ್ಶನ್‌, ಶೂಟಿಂಗ್​ನಲ್ಲಿ ಪಾಲ್ಗೊಳ್ಳುವ ಮುನ್ನ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ನೇರವಾಗಿ ಚಿತ್ರೀಕರಣದ ಸ್ಥಳಕ್ಕೆ ಆಗಮಿಸಿದರು. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಚಿತ್ರೀಕರಣ ಆರಂಭವಾಗಿದ್ದು, ಮಾರ್ಚ್‌ 12ರಿಂದ 14ವರೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ಹಾಗೂ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಮಾರ್ಚ್‌ 15ರಂದು ಲಲಿತ ಮಹಲ್‌ ಹೋಟೆಲ್​ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿದೆ.
ಇದನ್ನು ಓದಿ -ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

ಚಿತ್ರೀಕರಣದ ಸಂದರ್ಭದಲ್ಲಿ ಭದ್ರತೆಗಾಗಿ ಹಲವು ಪೊಲೀಸ್‌ ಸಿಬ್ಬಂದಿಯನ್ನು ಪಡೆದಿದ್ದಾರೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್‌ ಮಾಹಿತಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!