ಕರ್ತವ್ಯ ಲೋಪ ಆರೋಪದಡಿಯಲ್ಲಿ ಓರ್ವ ಪಿಎಸ್ಐ ಸೇರಿದಂತೆ 6 ಜನ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬುವರನ್ನು ಅಮಾನತು ಮಾಡಲಾಗಿದೆ.
ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿಯೇ ಆಲ್ದೂರು ಠಾಣೆ ಪೊಲೀಸ್ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಎಂಬುವರನ್ನು ಅಮಾನತು ಮಾಡಲಾಗಿದೆ.
ಅಮಾನತುಗೊಂಡ ಬಸವನಹಳ್ಳಿ ಠಾಣೆ ಪೊಲೀಸರು ಗಾಂಜಾ ಕೇಸ್ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯರಿಬ್ಬರಿಂದ 3 ಲಕ್ಷದ 40 ಸಾವಿರ ರೂಪಾಯಿ ಹಣ ಪಡೆದಿದ್ದರು ಎನ್ನಲಾಗಿದೆ. ಮತ್ತೊಂದು ಕಡೆ ಆಲ್ದೂರು ಠಾಣೆ ಪೊಲೀಸರು ಸಹ ಹೋಂ ಸ್ಟೇ ಮಾಲೀಕನಿಗೆ ಬೆದರಿಸಿ ಲಂಚ ಪಡೆದಿದ್ದರು ಎನ್ನಲಾಗಿದೆ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ