January 10, 2025

Newsnap Kannada

The World at your finger tips!

POLITICAL MINISTER

ಗ್ರಾಪಂಗಳಿಗೆ ಬಂಪರ್ ನೇರ ಅನುದಾನ – ವರ್ಷಕ್ಕೆ 1.5 ಕೋಟಿ : ಡಿಸಿಎಂ ಅಶ್ವತ್ಥ್ ನಾರಾಯಣ

Spread the love

ಗ್ರಾಪಂನ ಆಡಳಿತದ ಸುಧಾರಣೆಗೆ ಕ್ರಮ ಹಾಗೂ ಅಭಿವೃದ್ಧಿಗಾಗಿ ಪ್ರತಿ ಗ್ರಾಮ ಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರು ಅನುದಾನವನ್ನು ನೇರವಾಗಿ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿಳಿಸಿದರು.

ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ, 15ನೇ ಹಣಕಾಸು ಆಯೋಗದ ವರದಿಯಲ್ಲಿ ನೇರವಾಗಿ ಗ್ರಾಮ ಪಂಚಾಯಿತಿಗಳಿಗೇ ನೇರವಾಗಿ ಹೆಚ್ಚು ಅನುದಾನ ನೀಡುವ ಅಂಶಗಳಿವೆ. ಅದರಂತೆ, ಗ್ರಾಮೀಣಾಭಿವೃದ್ಧಿಗೆ ಬೇಕಾದ ಎಲ್ಲ ಹಣಕಾಸು ಒದಗಿಸಲಾಗುವುದು.‌ ಆಯಾ ಗ್ರಾಮಗಳ ನರೇಗಾ ಯೋಜನೆ ಗಳ ಅನುಷ್ಠಾನದ ಹೊಣೆಯನ್ನು ಜಿಲ್ಲಾ ಪಂಚಾಯಿತಿಯಿಂದ ಗ್ರಾಮ ಪಂಚಾಯಿತಿಗಳಿಗೆ ವಹಿಸಲು ನಿರ್ಧರಿಸಲಾಗಿದೆ ಎಂದರ.

ಆದರ್ಶ ಗ್ರಾಮಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಆರೋಗ್ಯ, ಮೂಲಸೌಕರ್ಯ, ಶಿಕ್ಷಣ, ರಸ್ತೆ, ಕೆರೆಕುಂಟೆ ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು. ಕೇವಲ ಆರು ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ವ್ಯವಸ್ಥೆ ಶೇ.30ರಷ್ಟು ಮಾತ್ರ ಇತ್ತು. ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಶೌಚಾಲಯ ಕಟ್ಟುವುದೂ ಅಸಾಧ್ಯ ಎನ್ನುವಂಥ ಸ್ಥಿತಿ ಇತ್ತು. ಪ್ರಧಾನಿ ಮೋದಿ ಸ್ವಚ್ಛ ಭಾರತ್‌ ಅಭಿಯಾನದಿಂದ ಇವತ್ತು ಗ್ರಾಮದ ಪ್ರತಿ ಮನೆಯಲ್ಲೂ ಶೌಚಾಲಯಗಳನ್ನು ಕಾಣಬಹುದಾಗಿದೆ ಎಂದರು.

ಗ್ರಾಮಗಳಲ್ಲಿ ಬಡತನ ನಿರ್ಮೂಲನೆ ಆಗಲಿಲ್ಲ. 70 ವರ್ಷಗಳಾದರೂ ಬಡತನ ಜೀವಂತವಾಗಿದೆ. ಮಾತಿನ ಬದಲಿಗೆ ರಚನಾತ್ಮಕವಾಗಿ ಕೆಲಸ ಮಾಡಿದರೆ ಗ್ರಾಮಗಳು ಉದ್ಧಾರವಾಗುತ್ತವೆ. ಕಾಂಗ್ರೆಸ್‌ ಬರೀ ಘೋಷಣೆಗಳನ್ನು ಮಾಡುತ್ತಾ ಬಂದಿತ್ತು. ಅವುಗಳಲ್ಲಿ ಗರೀಬಿ ಹಠಾವೋ ಎನ್ನುವುದು ಕೂಡ ಒಂದು. ಇಂಥ ನೂರಾರೂ, ಸಾವಿರಾರು ಘೋಷಣೆಗಳನ್ನು ಕಾಂಗ್ರೆಸ್‌ ಮಾಡಿದೆಯಾದರೂ, ಸಿಕ್ಕಿರುವ ಫಲಿತಾಂಶ ಮಾತ್ರ ಶೂನ್ಯವಾಗಿದೆ ಎಂದರು.

Copyright © All rights reserved Newsnap | Newsever by AF themes.
error: Content is protected !!