ಒಕ್ಕಲಿಗ ಸಮುದಾಯವನ್ನು ತುಳಿಯುವುದು ಮುಂದುವರೆದರೆ, ನಮ್ಮ ಹಕ್ಕಿನ ಮೀಸಲಾತಿ ನಿರಾಕರಿಸಿ ನಾವು ಪ್ರತ್ಯೇಕ ರಾಜ್ಯದ ಹೋರಾಟಕ್ಕೂ ಸೈ ಎಂದು ಆದಿಚುಂಚನಗಿರಿ ಮೈಸೂರು ಶಾಖಾಮಠದ ಸೋಮೇಶ್ವರನಾಥ ಸ್ವಾಮೀಜಿ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಒಕ್ಕಲಿಗರನ್ನು ತುಳಿಯುವುದು ಮುಂದುವರಿಸಿದರೆ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯವನ್ನು ಕೇಳಬೇಕಾದೀತು ಎಂದರು.
ಮೈಸೂರಿನ ಬೋಗಾದಿಯ ಆದಿಚುಂಚನಗಿರಿ ಶಾಖಾಮಠದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶ್ರೀಗಳು, ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಒಳಗೊಂಡಂತೆ ಈ ಭಾಗದಲ್ಲಿ ಒಕ್ಕಲಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೀಸಲಾತಿ ನಿರಾಕರಿಸಿದರೆ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯವನ್ನು ಕೇಳಬೇಕಾದೀತು. ಅದಕ್ಕೆ ಸರ್ಕಾರ ಅವಕಾಶ ನೀಡುವುದು ಬೇಡ ಸ್ವಾಮೀಜಿ ಎಚ್ಚರಿಸಿದರು.
ಒಕ್ಕಲಿಗರಿಂದಲೇ ಶೇ 60 ರಷ್ಟು ಪಾಲು:
ಒಕ್ಕಲಿಗ ಸಮಾಜದವರಿಂದಲೇ ಸರ್ಕಾರಕ್ಕೆ ಶೇ. 60 ರಷ್ಟು ಪಾಲು ಸಿಗುತ್ತಿದೆ. ಬೆಂಗಳೂರು ಮತ್ತು ಮೈಸೂರು ಬೆಳೆಯಲು ಒಕ್ಕಲಿಗ ಸಮಾಜದವರು ತಮ್ಮ ಜಮೀನು ನೀಡಿದ್ದಾರೆ. ಇಷ್ಟೆಲ್ಲಾ ಕೊಡುಗೆ ನೀಡಿದರೂ ಸಮುದಾಯಕ್ಕೆ ಶೇ. 4 ರಷ್ಟು ಮಾತ್ರ ಮೀಸಲಾತಿ ಸಿಗುತ್ತಿದೆ. ಈ ಅನ್ಯಾಯದ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ತಿಳಿಸಿದರು.
ಶೇ 15 ರಷ್ಟು ಮೀಸಲಾತಿ ಬೇಕು:
ಮೈಸೂರು ಮತ್ತು ಚಾಮರಾಜನಗರ ಒಕ್ಕಲಿಗರ ಸಂಘದ ಸಭೆಯಲ್ಲಿ ಜನಸಂಖ್ಯೆ ಆಧರಿಸಿ ಒಕ್ಕಲಿಗರಿಗೆ ಶೇ. 15 ರಷ್ಟು ಮೀಸಲಾತಿ ದೊರಕಿಸಿಕೊಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಒಗ್ಗಟ್ಟಾಗಿ ಹೋರಾಟ ನಡೆಸುವ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.
ಶಾಸಕರಾದ ಜಿ.ಟಿ.ದೇವೇಗೌಡ, ಶಾಸಕ ಎಲ್.ನಾಗೇಂದ್ರ, ಕಾಂಗ್ರೆಸ್ ಮುಖಂಡ ವಾಸು, ಹರೀಶ್ ಗೌಡ, ಪ್ರಶಾಂತ್ ಗೌಡ, ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು, ಗೌರವಾಧ್ಯಕ್ಷ ಜಿ.ಕುಮಾರಗೌಡ, ಪ್ರಧಾನ ಕಾರ್ಯದರ್ಶಿ ಬಿ.ಪಿ.ಬೋರೇಗೌಡ, ಮುಖಂಡರಾದ ಜಯರಾಂ, ನಂಜಯ್ಯ, ಚಂದ್ರೇಗೌಡ, ಮುಕುಂದ, ಸುರೇಶ್ ಉಪಸ್ಥಿತರಿದ್ದರು.
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
- ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
- ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
More Stories
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ