ಉನ್ನತ ಶಿಕ್ಷಣ ಇಲಾಖೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಂಬಂಧ ರಚಿಸಿರುವ ಸಮಿತಿಗೆ ಅಧ್ಯಕ್ಷರಾಗಿ ಎಸ್.ವಿ.ರಂಗನಾಥ್ ಅವರನ್ನು ನೇಮಕ ಮಾಡಿರುವ ವಿಚಾರವಾಗಿ ಹೆಚ್.ವಿಶ್ವನಾಥ್ ಹಾಗೂ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ನಡುವೆ ಜಟಾಪಟಿ ನಡೆದಿದೆ.
ರಂಗನಾಥ್ ನೇಮಕ ಅಪರಾಧ:
ಸದನದಲ್ಲಿ ಮಾತನಾಡಿದ ವಿಶ್ವನಾಥ್, ಉನ್ನತ ಶಿಕ್ಷಣ ಇಲಾಖೆಯಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿದೆ. 15 ಜನರ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆ ರಚಿಸಿದ್ದಾರೆ. ಆದರೆ ಸಮಿತಿಗೆ ಅಧ್ಯಕ್ಷರಾಗಿ ಎಸ್.ವಿ.ರಂಗನಾಥ್‌ರನ್ನು ನೇಮಿಸಿದ್ದು ಅಪರಾಧ ಎಂದು ಹೇಳಿದರು.
ಆದರೆ ವಿಶ್ವನಾಥ್ ಆರೋಪಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು, ಯಾವುದೇ ತಪ್ಪು ಮಾಡಿಲ್ಲ. ಎಸ್.ವಿ.ರಂಗನಾಥ್‌ಗೆ ಶಿಕ್ಷಣ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅವರು ಹುದ್ದೆ ನಿಭಾಯಿಸಲು ಸೂಕ್ತ ವ್ಯಕ್ತಿ ಎಂದೇ ಪರಿಗಣಿಸಿ, ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಲಾಗಿದೆ ಎಂದು ಸಮರ್ಥನೆ ನೀಡಿದ್ದರು.
ಅಶ್ವಥ್ ನಾರಾಯಣ್ ಮಾತಿಗೆ I am sorry. ಸಚಿವರು ಶಿಕ್ಷಣ ನೀತಿಯನ್ನು ಓದದೇ ಬಂದಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
ಈ ಮಾತಿಗೆ ಸದನದಲ್ಲೇ ಕಿಡಿಕಾರಿದ ಅಶ್ವಥ್ ನಾರಾಯಣ್, ನಾವು ಯಾವುದೇ ಕಾರಣಕ್ಕೂ ಎಸ್.ವಿ.ರಂಗನಾಥ್‌ರನ್ನು ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಅಲ್ಲದೇ ರಂಗನಾಥ್ ಅವರ ವಿರುದ್ಧದ ಹೇಳಿಕೆಯನ್ನು ಕಡತದಿಂದ ತೆಗೆದು ಹಾಕಲು ಒತ್ತಾಯಿಸಿದರು.
ಈ ವೇಳೆ ಸ್ಪಷ್ಟನೆ ನೀಡಿದ ವಿಶ್ವನಾಥ್, ನಾನು ರಂಗನಾಥ್ ಅವರ ಮೇಲೆ ವೈಯುಕ್ತಿಕವಾಗಿ ಆರೋಪ ಮಾಡಿಲ್ಲ. ಆದರೆ ಅವರು ಅಪರಾಧಗಳ ಹೊಣೆ ಹೊತ್ತಿರುವ ವ್ಯಕ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ನಾನು ಒಂದು ಹೇಳಿದರೆ ಸಚಿವರು ಬೇರೆ ರೀತಿಯೇ ಆರ್ಥೈಸಿಕೊಳ್ಳುತ್ತಿದ್ದಾರೆ ಎಂದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ