ಕೆ.ಆರ್.ಪೇಟೆಯಲ್ಲಿ ಭೂಸುಧಾರಣಾ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ರಸ್ತೆ ತಡೆ

Team Newsnap
1 Min Read

ಪ್ರತಿಭಟನೆ*ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಕನ್ನಡಪರ ಸಂಘಟನೆಗಳು ಕೆ.ಆರ್.ಪೇಟೆ ಪಟ್ಟಣದ ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು

ಕೆ.ಆರ್.ಪೇಟೆ ತಾಲೂಕು ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು

ರಸ್ತೆ ತಡೆ ಹಾಗೂ ಪ್ರತಿಭಟನೆಯಲ್ಲಿ ರೈತ ನಾಯಕರಾದ ಮುದುಗೆರೆ ರಾಜೇಗೌಡ, ಕೆ.ಆರ್.ಜಯರಾಂ, ನಂದಿನಿ ಜಯರಾಂ, ಲಕ್ಷ್ಮೀಪುರ ಜಗಧೀಶ್, ಬೂಕನಕೆರೆ ನಾಗರಾಜು, ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಜಿಲ್ಲಾ ಉಪಾಧ್ಯಕ್ಷ ಚೇತನಕುಮಾರ್, ಪುರಸಭೆ ಸದಸ್ಯರಾದ ಡಿ.ಪ್ರೇಮಕುಮಾರ್, ಕೆ.ಸಿ.ಮಂಜುನಾಥ್, ರವೀಂದ್ರಬಾಬು, ಜಿ.ಪಂ ಮಾಜಿಸದಸ್ಯ ಬಿ.ನಾಗೇಂದ್ರಕುಮಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.

Share This Article
Leave a comment