January 3, 2025

Newsnap Kannada

The World at your finger tips!

bannanje govindajachar

ಡಾ. ಬನ್ನಂಜೆ ಗೋವಿಂದಾಚಾರ್ಯ ವಿಧಿವಶ

Spread the love

ವಿದ್ವಾಂಸ. ಮಧ್ವ ಸಿದ್ಧಾಂತದ ಪ್ರತಿನಿಧಿ ಬನ್ನಂಜೆ ಗೋವಿಂದಾಚಾರ್ಯ ಭಾನುವಾರ ನಿಧನರಾದರು.

ಈ ಬೆಳಗ್ಗೆ ಉಡುಪಿ ಅಂಬಲಪಾಡಿಯ ತಮ್ಮ ನಿವಾಸದಲ್ಲಿ ನಿಧನರಾದ ಡಾ. ಬನ್ನಂಜೆ ಅವರಿಗೆ 84 ವರ್ಷ ವಯಸ್ಸಾಗಿತ್ತು. ನಾಲ್ವರು ಹೆಣ್ಣು ಮಕ್ಕಳು ಇದ್ದಾರೆ. ಓರ್ವ ಪುತ್ರ ಇತ್ತೀಚೆಗೆ ನಿಧನರಾಗಿದ್ದರು.

ಅಧ್ಯಾತ್ಮ ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದ ಬನ್ನಂಜೆ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಮಕಾಲೀನರಾಗಿದ್ದರು. ಹಲವಾರು ಗ್ರಂಥಗಳನ್ನು ರಚಿಸಿದ್ದರು.

govindachar
ಕೃತಿರಚನೆಗಳು

ಬಾಣಭಟ್ಟನ ಕಾದಂಬರಿ,ಕಾಳೀದಾಸನ ಶಾಕುಂತಲಾ,ಶೂದ್ರಕನ ಮೃಚ್ಛಕಟಿಕ
ಟಿಪ್ಪಣಿಗಳು ಹಾಗೂ ಶ್ರೀ ಶ್ರೀ ತ್ರಿವಿಕ್ರಮಾಚಾರ್ಯದಾಸರ ಆನ೦ದಮಾಲಾ ತ್ರಿವಿಕ್ರಮ ಪ೦ಡಿತರ ವಾಯುಸ್ತುತಿ
ವಿಷ್ಣುಸ್ತುತಿ ಇತ್ಯಾದಿ ಕೃತಿಗಳಿಗೆ ಟಿಪ್ಪಣಿ ಹಾಗೂ ಆರು ಉಪನಿಷತ್ತುಗಳಿಗೆ ಟೀಕೆ
ಮಧ್ವಾಚಾರ್ಯರ ಮಹಾಭಾರತದ ತಾತ್ಪರ್ಯದ ಟೀಕಾ ಕೃತಿಯಾದ ’ಯಮಕ ಭಾರತ’ ಭಾಗವತ ತಾತ್ಪರ್ಯ

ಕನ್ನಡಕ್ಕೆ ಅನುವಾದ

ಪುರುಷಸೂಕ್ತ, ಶ್ರೀ ಮದ್ಭಗವದ್ಗೀತೆ
ಶ್ರೀ ಸೂಕ್ತ, ಶಿವಸೂಕ್ತ, ನರಸಿಂಹ ಸ್ತುತಿ
ತಂತ್ರಸಾರ ಸಂಗ್ರಹ ಇತ್ಯಾದಿಗಳನ್ನು ಕನ್ನಡೀಕರಿಸಿದ್ದಾರೆ.

ಮಧ್ವಾಚಾರ್ಯರ ಮಾಧ್ವರಾಮಾಯಣ
ರಾಜರಾಜೇಶ್ವರಿ ಯತಿಗಳಮಂಗಲಾಷ್ಟಕ ಇತ್ಯಾದಿ ರಚನೆ ಮಾಡಿದ್ದಾರೆ.

ಕನ್ನಡ ಚಲನಚಿತ್ರಗಳಿಗೆ ಸಂಭಾಷಣೆ ಬರೆದಿರುವ ಇವರು, ಚಲನಚಿತ್ರ ಲೋಕಕ್ಕೂ ಬನ್ನಂಜೆಯವರು ಕೆಲಸ ಮಾಡಿದ್ದಾರೆ. ಜಿ.ವಿ. ಅಯ್ಯರ್ ಅವರಸಂಸ್ಕೃತ ಚಲನಚಿತ್ರ ’ಶ್ರೀ ಶಂಕರಾಚಾರ್ಯ’, ’ಶ್ರೀ ಮಧ್ವಾಚಾರ್ಯ’, ’ಶ್ರೀ ರಾಮಾನುಜಾಚಾರ್ಯ’ ಚಲನಚಿತ್ರಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿದ್ದಲ್ಲದೆ, ಸಂಭಾಷಣೆಯನ್ನು ರಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಷ್ಣುವರ್ಧನರ ಆಧ್ಯಾತ್ಮಿಕ ಗುರುವಾಗಿದ್ದರು ಎಂಬುದನ್ನು ಸ್ಮರಿಸಬಹುದು

ಬನ್ನಂಜೆ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ನಾಡಿನ ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವೇದ, ಪುರಾಣಗಳ ಕುರಿತ ಅವರ ಪ್ರವಚನಗಳು, ಕೃತಿಗಳು ಹಾಗೂ ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತ ಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆ ಯೊಂದನ್ನು ಕಳೆದುಕೊಂಡಂತಾಗಿದೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಯನ್ನು ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

vermicompost 1111
Copyright © All rights reserved Newsnap | Newsever by AF themes.
error: Content is protected !!