February 21, 2026

Newsnap Kannada

The World at your finger tips!

election , politics , JDS

ರೆಸಾರ್ಟ್ ನಲ್ಲಿ ಎಚ್ ಡಿಕೆ ಹುಟ್ಟು ಹಬ್ಬ: ಜಿ ಟಿ ದೇವೇಗೌಡ ಶುಭಾಶಯ!

Spread the love

ಚಿಕ್ಕಮಗಳೂರಿನ ಮುಳ್ಳಯ್ಯನಗರಿಯ ರೆಸಾರ್ಟ್ ವೊಂದರಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಮುಖಂಡರ ಜೊತೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.

ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದ ಕುಮಾರಸ್ವಾಮಿ, ಕೆಲವೇ ಮುಖಂಡರ ಜೊತೆ ಸೇರಿ ಕೇಕ್ ಕಟ್ ಮಾಡಿದರು.

hd kumarswamy

ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಯಾವುದೇ ಮಾಹಿತಿ ನೀಡದೆ ಚಿಕ್ಕಮಗಳೂರಿಗೆ ಆಗಮಿಸಿ ರುವ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಸೀರಾಜ್ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಕೇಕ್ ಕಟ್ ಮಾಡಿ ಅವರಿಗೆ ಕೇಕ್ ತಿನ್ನಿಸುವ ಮೂಲಕ ಜನ್ಮದಿನದ ಸಂಭ್ರಮ ಆಚರಿಸಿಕೊಂಡರು.

ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರೊಂದಿಗೆ ಹೆಚ್​ಡಿಕೆ ರೆಸಾರ್ಟ್​ನಲ್ಲಿ ತಂಗಿದ್ದರು. ಹುಟ್ಟುಹಬ್ಬ ಆಚರಣೆ ನಂತರ ಪುನಃ ಚಿಕ್ಕಮಗಳೂರಿನಿಂದ ವಾಪಸ್ ಬೆಂಗಳೂರಿಗೆ ವಾಪಸ್ ಬಂದರು.‌

ravinda sri
ಹುಟ್ಟುಹಬ್ಬಕ್ಕೆ ಶುಭ ಕೋರಿದ ಶಾಸಕ ಜಿ.ಟಿ.ದೇವೇಗೌಡ:

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಶುಭಾಶಯ ಕೋರಿ ಕುತೂಹಲ ಮೂಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಜೆಡಿಎಸ್ ವರಿಷ್ಠರ ಜೊತೆ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಸಾಕಷ್ಟು ಅಂತರ ಕಾಯ್ದುಕೊಂಡು ಜೆಡಿಎಸ್​ನಿಂದ ಹೊರ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭ ಕೋರಿದ್ದಾರೆ.

error: Content is protected !!