ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಉದ್ಯಮಿಯೊಬ್ಬರ 8 ವರ್ಷದ ಮಗನನ್ನು ದುಷ್ಕರ್ಮಿಗಳು ಅಪಹರಣ ಮಾಡಿ 17 ಕೋಟಿ ರು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಸಾರ್ವಜನಿಕರ ಎದುರೇ ದುಷ್ಕರ್ಮಿಗಳು ಉಜಿರೆಯಿಂದ ಬಿಳಿ ಬಣ್ಣದ ಹಾಗೂ ಯಲ್ಲೋ ಬೋರ್ಡ್ ಇದ್ದ ಇಂಡಿಕಾ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ.
ನಿನ್ನೆ ಸಂಜೆ 6.30ರ ಸುಮಾರಿಗೆ ನಡೆದಿದೆ. ಕಾರು ಉಜಿರೆಯಿಂದ ಚಾರ್ಮಾಡಿ ಕಡೆ ಹೋಗಿದೆ.
ಕಿಡ್ನಾಪ್ ಬಳಿಕ ಬಾಲಕನ ತಂದೆ ಬಿಜೋಯ್ ಗೆ ಕರೆ ಮಾಡಿದ ದುಷ್ಕರ್ಮಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕರೆ ಮಾಡಿದ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿದ್ದಾನೆ. ಬಾಲಕನ ತಂದೆಯ ಹಣಕಾಸು ವ್ಯವಹಾರ ಸಂಬಂಧ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವ್ಯವಹಾರದ ಹಿನ್ನೆಲೆಯಲ್ಲಿ ಪೂರ್ವಯೋಜಿತ ಅಪಹರಣ ಮಾಡಿರಬಹುದು ಎಂಬ ಶಂಕೆ ಇದೆ. ಸದ್ಯ ಚಾರ್ಮಾಡಿ ದಾಟಿ ಕಾರು ಸಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಈ ಕಾರಿನ ಬಗ್ಗೆ ಮಾಹಿತಿ ಕೊಡಲು ಸ್ಥಳೀಯರು ಕೋರಿದ್ದಾರೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಧರ್ಮಸ್ಥಳ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
More Stories
ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್