ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಶನಿವಾರ ಬೆಳಗ್ಗೆ ಕೆಂಗೇರಿ ಶಿರ್ಕಿ ಅಪಾರ್ಟಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಚಿತ್ರದುರ್ಗದಲ್ಲಿ 1949ರಲ್ಲಿ ಜನಿಸಿದ ಬೂದಾಳ್ ಕೃಷ್ಣ ಮೂರ್ತಿ 1973ರಲ್ಲಿ ಸಿದ್ಧಲಿಂಗಯ್ಯನವರ ಬೂತಯ್ಯನ ಮಗ ಅಯ್ಯು ಚಲನಚಿತ್ರದ ಸಹಾಯಕ ನಿರ್ದೇಶಕರಾಗುವ ಮೂಲಕ ಚಿತ್ರಂಗ ಪ್ರವೇಶಿಸಿದರು.
ಎರಡು ದಂಡೆಯ ಮೇಲೆ, ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚ ಸಾಮ್ರಾಜ್ಯ ಮುಂತಾದ ಚಿತ್ರಗಳನ್ನು ಬೂದಾಳ್ ನಿರ್ದೇಶಿಸಿದ್ದರು.

ಪ್ರೊಫೆಸರ್, ಶ್ರೀಗಂಧ, ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ, ನಿರ್ಣಯ, ಆರ್ಯಭಟ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದರು.
ಕೆಲವು ಕಾಲದಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣ ಮೂರ್ತಿ ಇಂದು ನಿಧನರಾದರು ಎಂದು ಪುತ್ರ ವಿಶ್ವಾಸ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು