ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ಸುರೇಶ್ ರೈನಾ ಅವರನ್ನು ಮುಂಬೈ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.
ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮುಂಬೈ ಡ್ರಾಗನ್ ಫ್ಲೈ ಕ್ಲಬ್ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಇದನ್ನು ಅರಿತ ಪೊಲೀಸರು ಇಲ್ಲಿಗೆ ರೈಡ್ ಮಾಡಿದ್ದು ಸುರೇಶ್ ರೈನಾ, ಖ್ಯಾತ ಗಾಯಕ ಗುರು ರಾಂಧವ ಸೇರಿದಂತೆ ಒಟ್ಟು 34 ಜನರನ್ನು ನಿನ್ನೆ ತಡ ರಾತ್ರಿ ಬಂಧಿಸಿದ್ದಾರೆ.
ಸದ್ಯ ಸುರೇಶ್ ರೈನಾ ಜಾಮೀನಿನಲ್ಲಿ ಹೊರ ಬಂದಿದ್ದಾರೆ. ಪೊಲೀಸರು ಬಂಧಿಸಿರುವ 34 ಜನರಲ್ಲಿ ಏಳು ಜನ ಕ್ಲಬ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಎನ್ನಲಾಗಿದೆ. ಈ ಬಗ್ಗೆ ಎಸ್ಆರ್ ಪಿ ಸಹಾರ್ ಪೊಲೀಸರು ಖಚಿತ ಮಾಹಿತಿ ನೀಡಿದ್ದಾರೆ.
ಸುರೇಶ್ ರೈನಾ ಮತ್ತು ಇತರರು ಸೇರಿದಂತೆ 34 ಜನರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188, 269, 34ರ ಅಡಿ, ಬಾಂಬೆ ಪೊಲೀಸ್ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ಕಾಯ್ದೆಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಮುಂಬೈ ವಿಮಾನ ನಿಲ್ದಾಣದ ಸಮೀಪದ ಡ್ರಾಗನ್ ಫ್ಲೈ ಕ್ಷಬ್ ಮೇಲೆ ಮಂಗಳವಾರ ನಸುಕಿನ 2.30ರ ವೇಳೆ ಈ ದಾಳಿ ನಡೆದಿದೆ.
ಕ್ಲಬ್‌ನಲ್ಲಿನ ಏಳು ಸಿಬ್ಬಂದಿ ಸೇರಿದಂತೆ ಅಲ್ಲಿದ್ದವರನ್ನು ಬಂಧಿಸಲಾಗಿದೆ. ಸುರೇಶ್ ರೈನಾ, ನಟ ಹೃತಿಕ್ ರೋಷನ್ ಪತ್ನಿ ಸುಸೇನ್ ಖಾನ್ ಮತ್ತು ಗುರು ರಾಂಧವ ಸೇರಿದಂತೆ ಅನೇಕರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ