ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ.ಆತನಿಗೆ ನಾಗರಿಕತೆ, ಸಂಸ್ಕೃತಿ ಎರಡೂ ಇಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಇಂದಿಲ್ಲಿ
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಸಾದ್ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು
ಆಕ್ರೋಶ ಹೊರ ಹಾಕಿದರು.
ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶ್ರೀನಿವಾಸ ಪ್ರಸಾದ್, ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಯಾಕೆ ದೂರು ಕೊಡ್ತಿದ್ರು? ಎಂದು ಪ್ರಶ್ನೆ ಮಾಡಿದರು.
ಮುಖ್ಯಮಂತ್ರಿ ಸ್ಥಾನ ಹೋದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಎಂದು ಪ್ರಸಾದ್ ಹೇಳಿದರು.
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
More Stories
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ