ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಕರೋನಾ ಪಾಸಿಟಿವ್ ಧೃಡವಾಗಿದೆ.
ಮಂಗಳವಾರ ಕರೋನಾ ಪರೀಕ್ಷೆಗೆ ಒಳಪಟ್ಟಾಗ ಅವರಿಗೆ ಕರೋನ ಸೋಂಕು ಇರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಮಲ್ಲಿಗೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಆಯುಕ್ತರು ಕೋವಿಡ್ ಮಾರ್ಗಸೂಚಿಯಂತೆ ಕ್ವಾರಂಟೈನ್ ನಲ್ಲಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಪ್ರಕರಣ ಕಡಿಮೆಯಾಗುತ್ತಿರುವ ಮಧ್ಯೆಯೇ ಬ್ರಿಟನ್ ನಲ್ಲಿ ಕಾಣಿಸಿಕೊಂಡ ಹೊಸ ರೂಪಾಂತರ ಕರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವುದು ಎಲ್ಲರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕರೋನಾ ಸೋಂಕು ಧೃಡಪಟ್ಟರೂ ಹೊಸರೂಪದ ಕರೋನಾ ವೈರಸ್ ನಿಂದ ಉದ್ಭವಿಸುವ ಸವಾಲಗಳನ್ನು ಎದುರಿಸಲು ಕ್ವಾರಂಟೈನ್ ನಲ್ಲಿರುವ ಆಯುಕ್ತ ಮಂಜುನಾಥ್ ಪ್ರಸಾದ್ ಕೋವಿಡ್ ಕರ್ತವ್ಯದಲ್ಲಿರುವ ವೈದ್ಯರು, ಅದಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ನಿರಂತರವಾಗಿ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಾರೆ. ಅಗತ್ಯ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.
More Stories
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ