ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ ನಂತರ ನಡೆಸಲು ನಿರ್ಧರಿಸಲಾಗಿದೆ ಹಾಗೂ ಶೀಘ್ರವೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಶಿಕ್ಷಕರು ಮತ್ತು ವಿದ್ಯಾರ್ಥಿ ಗಳೊಂದಿಗೆ ವೆಬಿನಾರ್ ಮೂಲಕ ಸಮಾಲೋಚನೆ ನಡೆಸಿದ ಸಚಿವ ರಮೇಶ್ ಫೆಬ್ರವರಿ 2021 ರ ವರೆಗೆ ಪರೀಕ್ಷೆಗಳು ನಡೆಯುವುದಿಲ್ಲ ಪರೀಕ್ಷೆ ರದ್ದಾಗಲ್ಲ ಎಂದರು.
ಪರೀಕ್ಷೆಯನ್ನು ರದ್ದುಗೊಳಿಸುವುದು ಮುಖ್ಯವಲ್ಲ. ಪರೀಕ್ಷೆಗಳಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದು ಸರಿಯಾದ ಕ್ರಮವೂ ಅಲ್ಲ. ಹಾಗೆ ಮಾಡಿದರೆ ವಿದ್ಯಾರ್ಥಿಗಳಿಗೆ ಮುಂದೆ ಭವಿಷ್ಯದಲ್ಲಿ ಉನ್ನತ ಶಿಕ್ಷಣ, ಉದ್ಯೋಗ ಮತ್ತು ಪ್ರವೇಶ ಪಡೆಯುವಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಫೆಬ್ರವರಿ ನಂತರವೇ ನಿರ್ಧರಿಸ ಲಾಗುತ್ತದೆ. ಪರೀಕ್ಷೆ ರದ್ದು ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ