ನಾಳೆ (ಡಿ. 25 ) ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆಯನ್ನು ಉತ್ತಮ ಆಡಳಿತ ದಿನವಾಗಿ ಸರ್ಕಾರ ಆಚರಿಸುವ ಹಿನ್ನೆಲೆಯಲ್ಲಿ ರೈತರಿಗೆ ಪ್ರಧಾನಿ ಮೋದಿ ಆರ್ಥಿಕ ನೆರವು ವರ್ಗಾವಣೆ ಘೋಷಣೆ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಾಳೆ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ 9 ಕೋಟಿ ರೈತರಿಗೆ 18 ಸಾವಿರ ಕೋಟಿ ರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ 6 ವಿವಿಧ ರಾಜ್ಯಗಳ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.ಅಲ್ಲದೆ ರೈತರು ಪಿಎಂ-ಕಿಸಾನ್ ಬಗ್ಗೆ ತಮ್ಮ ಅನುಭವಗಳನ್ನು ಮತ್ತು ರೈತರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡ ಇತರ ಹಲವಾರು ಉಪಕ್ರಮಗಳ ಬಗ್ಗೆ ಅನಿಸಿಕೆ ಹಂಚಿಕೊಳ್ಳಲಿದ್ದಾರೆ.
ಯಾರಿಗೆ ಎಷ್ಟು ದುಡ್ಡು?
ಪಿಎಂ-ಕಿಸಾನ್ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ರೈತರಿಗೆ ವರ್ಷಕ್ಕೆ 6,000 ರೂಗಳನ್ನು ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಪಾವತಿ ಮಾಡಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ