ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಹೋರಾಟ ಅಗತ್ಯವೇ ಇಲ್ಲ. ಕುರುಬರನ್ನು ಇಬ್ಬಾಗ ಮಾಡುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಡಿ.29ಕ್ಕೆ ಮೈಸೂರಿನಲ್ಲಿ ಕುರುಬರ ಎಸ್‌ಟಿ ಮೀಸಲಾತಿ ಹೋರಾಟ ಹಿನ್ನೆಲೆ ಪ್ರತಿಕ್ರಿಯಿಸಿದ ಸಿದ್ದು, ನಾನು ಸಿಎಂ ಆಗಿದ್ದಾಗಲೇ ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸ್ಸು ಮಾಡಿದ್ದೆ. ಈಶ್ವರಪ್ಪ, ವಿಶ್ವನಾಥ್ ಇಬ್ಬರು ಬಿಜೆಪಿ ಸರ್ಕಾರದಲ್ಲಿದ್ದಾರೆ. ಅವರು ಕುಲಶಾಸ್ತ್ರ ಅಧ್ಯಯನ ವರದಿ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿಸಲಿ ಎಂದರು.
ಕುರುಬರನ್ನು ಇಬ್ಬಾಗ ಮಾಡುವ ಆರ್‌ಎಸ್‌ಎಸ್ ಹುನ್ನಾರ. ಜಾತಿ ಗಣತಿ ವರದಿ ಪಡೆಯಲು ಎಚ್‌ಡಿಕೆ ಅಡ್ಡಿಯಾಗಿದ್ದಾರೆ ಎಂಬ ಪುಟ್ಟರಂಗಶೆಟ್ಟಿ ಹೇಳಿಕೆ ಸತ್ಯ ಹೇಳಿದ್ದಾರೆ. ವರದಿ ಸ್ವೀಕಾರ ಮಾಡದಂತೆ ಕುಮಾರಸ್ವಾಮಿ ಹೆದರಿಸಿದ್ದರು. ಕುಮಾರಸ್ವಾಮಿ ಯಾಕೆ ವರದಿ ಪಡೆಯಲು ಹಿಂದೇಟು ಹಾಕಿದ್ರು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ