ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ 1 ರಿಂದ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಹೇಳಿದೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ.
ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದೆ. ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು [email protected] ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಗಳು ಕೋರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು