ಅತೀ ವೇಗದಿಂದ ಬೈಕ್ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ
ಆಯತಪ್ಪಿ ಮಂಡ್ಯದ ಯುವ ಪ್ರೇಮಿಗಳ ದುರಂತ ಸಾವು ಕಂಡ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹಾಗೂ ಮಧುವನಹಳ್ಳಿ ಮುಖ್ಯರಸ್ತೆಯಲ್ಲಿ ಜರುಗಿದೆ.
ಮಂಡ್ಯ ಜಿಲ್ಲೆಯ ಹರುವು ಗ್ರಾಮದ ಐಶ್ವರ್ಯ (18) ಹಾಗೂ ಆನಂದ್ (22) ಮೃತಪಟ್ಟ ಪ್ರೇಮಿಗಳು.
ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಪೂಜೆ ಮುಗಿಸಿ ಮಂಡ್ಯಕ್ಕೆ ವಾಪಸ್ಸು ಆಗುತ್ತಿದ್ದಾಗ ಅತೀ ವೇಗವಾಗಿ ಬೈಕ್ ಚಾಲನೆ ಮಾಡಿದ್ದರಿಂದ ಆಯಾತಪ್ಪಿ ರಸ್ತೆ ಬದಿಯ ಚಾನಲ್‌ಗೆ ಬಿದ್ದು ಭೀಕರವಾಗಿ ಗಾಯಗೊಂಡಿದ್ದರು.
ತಕ್ಷಣ ಸಾರ್ವಜನಿಕರು ಗಾಯಾಳು ಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು. ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಸೇರಿದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿ ಯಾಗದೇ ಕೊನೆಯುಸಿರೆಳಿದ್ದಾನೆ.
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ನಾಗರಾಜು, ಸಿಪಿಐ ಶ್ರೀಕಾಂತ್ ಹಾಗೂ ಎಸ್ ಐ ಅಶೋಕ್ ಭೇಟಿ ನೀಡಿ ಪರೀಶಿಲಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ