ರಾಜ್ಯ ಸರ್ಕಾರಕ್ಕೆ ಮುಜುಗರವನ್ನು ತಂದಂತ 8 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
ಗ್ರೇವಿಯೆನ್ಸ್ ಅಂಡ್ ಹ್ಯೂಮನ್ ರೈಟ್ಸ್ ಎಡಿಜಿಪಿಯಾಗಿದ್ದಂತ ಮಾಲಿನಿ ಕೃಷ್ಣಮೂರ್ತಿಯವರನ್ನು ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಿ.ರೂಪಾ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಡಿ.ರೂಪಾ ಅವರನ್ನು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ಆಗಿ ನೇಮಕ ಮಾಡಿ, ವಿವಾದಿತ ಹುದ್ದೆಯಿಂದ ಎತ್ತಂಗಡಿ ಮಾಡಿದೆ.
ಡೈರೆಕ್ಟರ್ ಆಪ್ ಸಿವಿಲ್ ರೈಟ್ಸ್ ಎನ್ ಫೋರ್ಸ್ಮೆಂಟ್ ನ ಎಡಿಜಿಪಿ ಕೆ.ರಾಮಚಂದ್ರರಾವ್ ಅವರನ್ನು ಗ್ರೇವಿಯನ್ಸ್ ಮತ್ತು ಹ್ಯೂಮನ್ ರೈಟ್ಸ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ.
ಡಿ.ರೂಪಾ ಜೊತೆ ಜೊತೆಯಲ್ಲೇ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಐಎಸ್ ಡಿಯ ಐಜಿಪಿಯಾಗಿ ವರ್ಗಾವಣೆ ಮಾಡಿದೆ. ಎಸಿಬಿಯ ಐಜಿಪಿಯಾಗಿದ್ದಂತ ಚಂದ್ರಶೇಖರ್ ಅವರನ್ನು ಬೆಂಗಳೂರು ಕೇಂದ್ರೀಯ ವಿಭಾಗದ ಐಜಿಪಿಯಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಮೈಸೂರು ದಕ್ಷಿಣ ವಿಭಾಗದ ಐಜಿಪಿ ವಿಪುಲ್ ಕುಮಾರ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಐಜಿಪಿ ಮತ್ತು ಡೈರೆಕ್ಟರ್ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
ಮಂಗಳೂರಿನ ಡಿಐಜಿ ಹಾಗೂ ಕಮೀಷನರ್ ವಿಕಾಸ್ ಕುಮಾರ್ ಅವರನ್ನು, ಕರ್ನಾಟಕ ರಿಸರ್ವ್ ಪೊಲೀಸ್ ನ ಡಿಐಜಿಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
ವರ್ಟಿಕ ಕಟಿಯಾರ್ ಅವರನ್ನು ಬೆಂಗಳೂರಿನ ಕ್ರೈಮ್ ರೆಕಾರ್ಡ್ ಬ್ಯೂರೋದ ಸೂಪರಿಂಡೆಂಟ್ ಆಫ್ ಪೊಲೀಸ್ ಆಗಿ, ರಂಜಿತ್ ಕುಮಾರ್ ಬಂದರು ಅವರನ್ನು ಮಂಗಳೂರು ಸೌತ್ ನ ಎಸಿಪಿ ಸ್ಥಾನದಿಂದ ಬಟ್ಕಳ ಉಪ ವಿಭಾಗದ ಎಸಿಪಿಯಾಗಿ ನೇಮಕ ಮಾಡಲಾಗಿದೆ.
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ