February 22, 2026

Newsnap Kannada

The World at your finger tips!

sucide

ಖಾಸಗಿ ಕಾಲೇಜು ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ

Spread the love

ಖಾಸಗಿ ಕಾಲೇಜಿನ‌ ಉಪನ್ಯಾಸಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ರೋಣ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಬ್ರಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ಗೆ ಲಾಕ್ ಡೌನ್ ವೇಳೆಯಲ್ಲಿ ಕೆಲಸ ಇರಲಿಲ್ಲ. ಅವರ ಪತ್ನಿಯೂ ಕೂಡ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ‌ .

ಕಳೆದ 5 ವರ್ಷಗಳ ಹಿಂದೆ ಶಿರಸಿ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದೆ. ನಂತರ ಅವರಿಬ್ಬರೂ ಹೆಬ್ರಿಯ ಬಡಗುಡ್ಡೆ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಬ್ಬರೂ ಮದುವೆಯಾಗಿದ್ದು ಎರಡೂ ಮನೆಯವರಿಗೆ ಗೊತ್ತಿರಲಿಲ್ಲ.

ಕೆಲಸವಿಲ್ಲದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ವೆಂಕಟೇಶ್ ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಬ್ರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!