March 14, 2026

Newsnap Kannada

The World at your finger tips!

si

ಮಹಿಳಾ ಎಸ್ ಐ ಆರ್ಜೂ ಆತ್ಮಹತ್ಯೆ : ಅನುಮಾನಾಸ್ಪದ ಸಾವಿನ ಶಂಕೆ

Spread the love

ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೊಂದು ಅನುಮಾಸ್ಪದ ಸಾವು ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಅನೂಪ್ ನಗರದ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್ಜೂ ಪವಾರ್(30) ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 2015ರಲ್ಲಿ ಪೊಲೀಸ್ ಇಲಾಖೆಗೆ ಇವರು ಸೇರಿದ್ದರು.

ಅನೂಪ್ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಾಮಿಲಿ ಜಿಲ್ಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇಂದು ಬೆಳಿಗ್ಗೆ ಅವರ ಮನೆಯಲ್ಲೇ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

error: Content is protected !!