ಸಾಕಷ್ಟು ಸಾಲ ಮಾಡಿಕೊಂಡಿದ್ದ
ಬೆಂಗಳೂರು ಮೂಲದ ಉದ್ಯಮಿಯೊಬ್ಬರ ಶವ ಮೈಸೂರಿನ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ. ಇದೊಂದು ಆತ್ಮಹತ್ಯೆ ಎಂದು ಹೇಳಲಾಗುತ್ತದೆ. ಆದರೆ ಸಾವಿನ ಹಿಂದೆ ಅನುಮಾನದ ಹುತ್ತ ಬೆಳದಿದೆ.
ಉಮಾಶಂಕರ್ (45) ಮೃತ ಉದ್ಯಮಿ. ಪತ್ನಿಯ ಜೊತೆ ಲಾಡ್ಜ್ ಗೆ ಬಂದಿದ್ದರು. ಆದರೆ ಬೆಳಿಗ್ಗೆ ಪತ್ನಿ ಕವಿತಾ ಎಂಬಾಕೆ ನಾಪತ್ತೆಯಾದ ಬೆನ್ನಲ್ಲೇ ಲಾಡ್ಜ್ ನ ಅದೇ ರೂಂ ನಲ್ಲಿ ಉದ್ಯಮಿ ಉಮಾಶಂಕರ್ ಸಾವನ್ನಪ್ಪಿರುವುದು ಶಂಕೆಗೆ ಕಾರಣವಾಗಿದೆ.
ಲಾಡ್ಜ್ ನ ಕೊಠಡಿಯಲ್ಲಿ ಇನ್ಸುಲಿನ್ ಪತ್ತೆಯಾಗಿದೆ. ಅತಿಯಾದ ಇನ್ಸುಲಿನ್ ನಿಂದ ಉಮಾಶಂಕರ್ ಸಾವನ್ನಪ್ಪಿರುವ ಶಂಕೆಯೂ ವ್ಯಕ್ತವಾಗಿದೆ. ಇದೇ ವೇಳೆ ಕೊಠಡಿಯಲ್ಲಿ ಪತ್ರ ಕೂಡ ಸಿಕ್ಕಿದ್ದು, ಪತ್ರದಲ್ಲಿ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದು ಉಮಾಶಂಕರ್ ಹಾಗೂ ಪತ್ನಿ ಕವಿತಾ ಸಹಿ ಹಾಕಿದ್ದಾರೆ.
ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಲಾಡ್ಜ್ ರೂಂ ನಿಂದ ಎಸ್ಕೇಪ್ ಆಗಿರುವ ಕವಿತಾಳನ್ನು ಮಂಡಿ ಪೋಲಿಸರು ಹುಡುಕಾಟ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು