ಹೊಸ ಭರವಸೆಯೊಂದಿಗೆ ಜನವರಿ 1ರಿಂದ ಶಾಲಾ – ಕಾಲೇಜು ಆರಂಭವಾದ ಬೆನ್ನಲ್ಲೇ ಗದಗದ ಐದು ಶಾಲೆಗಳ 10 ಮಂದಿ ಶಿಕ್ಷಕರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಗದಗ ನಗರದ 4 ಹಾಗೂ ನರಗುಂದದ ಒಂದು ಶಾಲೆಯಲ್ಲಿನ 10 ಮಂದಿ ಪ್ರೌಢ ಶಾಲೆ ಶಿಕ್ಷಕರಿಗೆ ಸೋಂಕು ಕಾಣಿಸಿದೆ. ಕೂಡಲೇ ಶಾಲಾ ಮಕ್ಕಳನ್ನು ಮನೆಗೆ ಕಳುಹಿಸಲಾಯಿತು. ಜಿಲ್ಲೆಯ 6, 665 ಶಿಕ್ಷಕರಿಗೆ ಕೊರೋನಾ ತಪಾಸಣೆ ಮಾಡಲಾಗಿತ್ತು. ಇದರಲ್ಲಿ 10 ಶಿಕ್ಷಕರಿಗೆ ಸೋಂಕು ತಗುಲಿದೆ.
ಸೋಂಕಿಗೆ ಒಳಗಾಗಿರುವ ಶಿಕ್ಷಕರನ್ನು ಕ್ವಾರೆಂಟೈನ್ ಒಳಗಾಗಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸೂಚನೆಯ ಮೇರೆ ಮುಂದಿನ ದಿನಗಳಲ್ಲಿ ಶಾಲೆಗಳನ್ನು ಅರಂಭಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಡಿಡಿಪಿಐ ಬಸವರಾಜ್ ತಿಳಿಸಿದ್ದಾರೆ.
ಶಿಕ್ಷಕರಿಗೆ ಕೊರೋನಾ ಬಂದಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು