January 10, 2025

Newsnap Kannada

The World at your finger tips!

Dr K Sudhakar 1581670361

sudhakar picture

ಕೊರೊನಾ ಲಸಿಕೆ ಸರ್ಕಾರಿ ವ್ಯವಸ್ಥೆಯಲ್ಲೇ ವಿತರಣೆ: ಸಚಿವ ಡಾ.ಕೆ.ಸುಧಾಕರ್

Spread the love

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮಲ್ಲೇ ಬಹು ಬೇಗ ಆವಿಷ್ಕಾರ ಮಾಡಿರುವ ಕೊರೊನಾ ಲಸಿಕೆಯನ್ನು ಸರ್ಕಾರಿ ವ್ಯವಸ್ಥೆಯಲ್ಲೇ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಲಸಿಕೆಯನ್ನು ಮೊದಲಿಗೆ ಕೊರೊನಾ ಯೋಧರಿಗೆ ನೀಡಬಹುದು ಎಂಬ ಅಭಿಪ್ರಾಯ ಇದೆ. 3 ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದ ಬಳಿಕ ಅಂತಿಮವಾಗಿ ಪರವಾನಗಿ ದೊರೆಯಬಹುದು. ಇದು ಯಶಸ್ವಿಯಾದ ಲಸಿಕೆ ಹಾಗೂ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ತಿಳಿದುಬಂದಿದೆ.

ಸರ್ಕಾರಿ ವ್ಯವಸ್ಥೆಯಲ್ಲಿ ಲಸಿಕೆ ವಿತರಣೆ:

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆ ಮಾಡಲು ಸಿದ್ಧತೆ ಪೂರ್ಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕಿದ್ದರೆ ಅದನ್ನೂ ಪಡೆಯುವ ಬಗ್ಗೆ ಚಿಂತಿಸಲಾಗುವುದು ಎಂದರು.

ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಮತ್ತು ಅವರ ಸಂಪರ್ಕಿತರಲ್ಲಿ ಒಟ್ಟು 48 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಪೈಕಿ 34 ಮಂದಿ ಯು.ಕೆ.ಯಿಂದ ಹಿಂದಿರುಗಿದವರಾಗಿದ್ದಾರೆ. ಇವರೆಲ್ಲರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, 10 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾಗಿದೆ. ಇವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಯಾರಿಗೂ ರೋಗ ತೀವ್ರವಾಗಿ ಕಾಡಿಲ್ಲ ಎಂದರು.

ಯು.ಕೆ.ಯಿಂದ ಹಿಂದಿರುಗಿದವರಲ್ಲಿ 75 ಮಂದಿಯ ಸಂಪರ್ಕ ಪತ್ತೆಯಾಗಿಲ್ಲ. ಇದನ್ನು ಬೇಗನೆ ಪತ್ತೆ ಮಾಡಿ ಎಂದು ಬಿಬಿಎಂಪಿ ಹಾಗೂ ಗೃಹ ಇಲಾಖೆಗೆ ಕೋರಲಾಗಿದೆ. 75 ರಲ್ಲಿ ಮೂವರು ಮಾತ್ರ ವಿದೇಶಿ ವಿಳಾಸ ಹೊಂದಿದ್ದಾರೆ. ಕೆಲ ವಿದೇಶಿ ಪ್ರಜೆಗಳ ಪಾಸ್ ಪೋರ್ಟ್ ನಲ್ಲಿ ಮಾಹಿತಿ ಕೊರತೆ, ಸಿಮ್ ಸಮಸ್ಯೆಯಿಂದಾಗಿ ಸಂಪರ್ಕ ಪತ್ತೆಯಾಗದೇ ಇರಬಹುದು ಎಂದು ಸ್ಪಷ್ಟಪಡಿಸಿದರು.

Copyright © All rights reserved Newsnap | Newsever by AF themes.
error: Content is protected !!