ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು.
ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರಿಗೆ ನೈಸರ್ಗಿಕ ಅನಿಲ ಪೂರೈಸುವ ಪೈಪ್ಲೈನ್ ಅನ್ನು ಗೈಲ್ ಇಂಡಿಯಾ ನಿರ್ಮಿಸಿದೆ.
2009ರಲ್ಲೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಸುಮಾರು 3,000 ಕೋಟಿ ರು ವೆಚ್ಚದಲ್ಲಿ ನಿರ್ಮಾಣವಾದ 450 ಕಿ.ಮೀ ಉದ್ದದ ಪೈಪ್ಲೈನ್ ಮೂಲಕ ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ.
ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿಯವರು, 450 ಕಿ.ಮೀ ಉದ್ದದ ನೈಸರ್ಗಿಕ ಪೈಪ್‌ಲೈನ್ ಅನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡುತ್ತಿರುವುದು ಗೌರವದ ವಿಚಾರ ಎಂದರು.
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ