ಬ್ರಿಟನ್‌ನಲ್ಲಿ 6 ವಾರ ಲಾಕ್ ಡೌನ್ ಗೆ ನಿರ್ಧಾರ – ಪ್ರಧಾನಿ ಬೋರಿಸ್ ಭಾರತ ಪ್ರವಾಸ ರದ್ದು

Team Newsnap
1 Min Read

ಬ್ರಿಟನ್‌ನಲ್ಲಿ ರೂಪಾಂತರಿ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನವರಿ 26 ರಂದು ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಬೇಕಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸವನ್ನು ರದ್ದುಪಡಿಸಿದ್ದಾರೆ.

ಈಗಾಗಲೇ, ಬ್ರಿಟನ್‌ನಲ್ಲಿ ರೂಪಾಂತರಿ ಕರೋನಾ ತೀವ್ರತೆ ಹೆಚ್ಚಾಗಿದೆ. ಹೀಗಾಗಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ತಮ್ಮ ರಾಷ್ಟ್ರದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕಲವು ಜವಾಬ್ದಾರಿ ನಿಭಾಯಿಸಲು ಬೋರಿಸ್‌ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾಗಿ ಬ್ರಿಟನ್ ಸರ್ಕಾರ ಸ್ಪಷ್ಟಪಡಿಸಿದೆ.

ಆರು ವಾರ ಲಾಕ್ ಡೌನ್ :

ಬ್ರಿಟನ್‌ನಲ್ಲಿ ಕರೋನಾ ಲಸಿಕೆಯ ಸಾರ್ವತ್ರಿಕ ಬಳಕೆ ವೇಗವಾಗಿ ಸಾಗುತ್ತಿದೆ. ದೇಶಾದ್ಯಂತ ಮುಂದಿನ ಆರು ವಾರಗಳವರೆಗೆ ಕಠಿಣ ಲಾಕ್ ಡೌನ್ ಘೋಷಣೆ ಮಾಡಲಾಗುವುದು. ಬುಧವಾರದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಬಂದ್‌ ಆಗಲಿವೆ ಎಂದು ತಿಳಿಸಿದ್ದಾರೆ.

ಜನವರಿ ಮಾಸಾತ್ಯಂಕ್ಕೆ ಪೂರ್ವ ನಿಯೋಜಿಸಿದಂತೆ ಭಾರತಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬೋರಿಸ್ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿ ವಿಷಾಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share This Article
Leave a comment