ಕೊರೋನಾ ಭೀತಿಯಲ್ಲಿ ಶಾಲಾ, ಕಾಲೇಜುಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ ಕೊನೆಗೂ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೂ ತಾತ್ವಿಕವಾಗಿ ದಿನಗಳನ್ನು ನಿಗದಿ ಮಾಡಿದೆ.
ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿರುವ ಮಾಹಿತಿ ಪ್ರಕಾರ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ವೇಳಾ ಪಟ್ಟಿ ಸಿದ್ದವಾಗುತ್ತಿದೆ ಎಂದಿದ್ದಾರೆ.
ಬೋಧನೆ ಮತ್ತು ಕಲಿಕೆಗಾಗಿ ಪಾಠಗಳನ್ನು ಗುರುತಿಸಿ, ಶಾಲೆಗಳಿಗೆ ಶೀಘ್ರವೇ ಕಳುಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಕೊರೊನಾ ಭೀತಿಯ ನಡುವೆ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಸಮಯ ಕೂಡ ನಿಗದಿಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು