ಪ್ರೇಮ ಕುಮಾರಿ ಎಂಬ ಮಹಿಳೆ ಜೊತೆ ಪ್ರೀತಿ – ಪ್ರೇಮ ಪ್ರಕರಣದ ಆರೋಪ ಹೊತ್ತಿದ್ದ ಶಾಸಕ ರಾಮದಾಸ್ ಗೆ ಜಿಲ್ಲಾ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರೇಮ ಕುಮಾರಿ ಹಾಗೂ ರಾಮದಾಸ್ ನಡುವೆ ಅಂಕುರಿಸಿದ್ದ ಪ್ರೇಮ ಕೊನೆಗೆ ಸಾಕಷ್ಟು ವಿವಾದ ಸೃಷ್ಟಿಯಾಯಿತು. ಕೊನೆಗೆ ಪೋಲಿಸ್ ಠಾಣೆ ಮೆಟ್ಟಿಲೇರಿತ್ತು.
ಈ ನಡುವೆ ಪ್ರೇಮಕುಮಾರಿ ರಾಮದಾಸ್ ವಿರುದ್ಧ ಮಾಡಿದ್ದ ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ಸರಸ್ವತಿ ಪುರಂ ಪೋಲಿಸರು ಬಿ ರಿಪೋರ್ಟ್ ಹಾಕಿ ಕೇಸ್ ಕ್ಲೋಸ್ ಮಾಡಿದ್ದರು.
ಪೋಲಿಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ನ್ಯಾಯಾಲಯವು ತಿರಸ್ಕರಿಸಿತು. ಅಲ್ಲದೇ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ರದ್ದು ಮಾಡುವಂತೆ ರಾಮದಾಸ್ ಹೈ ಕೋಟ್೯ ಮೊರೆ ಹೋದಾಗ ಹೈಕೋರ್ಟ್ ಅರ್ಜಿಯನ್ನು ನಿರಾಕರಿಸಿತು.
ನಂತರ ರಾಮದಾಸ್ ಜಿಲ್ಲಾ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ಅರ್ಜಿ ಪರಿಶೀಲನೆ ಮಾಡಿ, 50 ಸಾವಿರ ರು ಮೊತ್ತದ ವೈಯಕ್ತಿಕ ಬಾಂಡ್ ಪಡೆದು ಜಾಮೀನು ಮಾಡಿದೆ.
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ