- ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್‍ನಲ್ಲಿ ಬಿಜೆಪಿ ಹಾಳಾಗುತ್ತೆ: ಹೆಚ್.ವಿಶ್ವನಾಥ್ ಭವಿಷ್ಯ
- ವಿಜಯೇಂದ್ರನಿಂದ ಬಿಜೆಪಿಗೆ ಸನ್ ಸ್ಟ್ರೋಕ್
- ಶೀಘ್ರದಲ್ಲಿಯೇ ಸಿಡಿ ಬ್ಲಾಸ್ಟ್ ಆಗುತ್ತೆ
ಸಿಎಂ ಯಡಿಯೂರಪ್ಪ ನವರನ್ನು ಕುರಿತಾ ಸಡಿ ಸಂಕ್ರಮಣಕ್ಕೆ ಹೋರಿ ಹಿಡಿದುಕೊಂಡ ರೀತಿಯಲ್ಲಿ ತಡೆದು ನಿಲ್ಲಿಸಲಾಗಿದೆ. ಆದರೆ ಸಿಡಿ ಶೀಘ್ರವೇ ಬಿಡುಗಡೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಳ್ಳಿ ಹಕ್ಕಿ ಎಚ್ ವಿಶ್ವನಾಥ್ ರಾಯಚೂರಿನಲ್ಲಿ ಗುರುವಾರ ಸ್ಪಷ್ಟ ಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್ ಈ ಸಿಡಿಯನ್ನು
ಶಾಸಕ ಯತ್ನಾಳ್ ಅಥವಾ ಯಾರೋ ಒಬ್ಬರು ಬಿಡುಗಡೆ ಮಾಡುತ್ತಾರೆ ಎಂದರು.
ನಾವು ಪರಿಸ್ಥಿತಿ ಶಿಶುಗಳು:
ಯಡಿಯೂರಪ್ಪರವರ ಬಗ್ಗೆ ಈಗಲೂ ನಮಗೆ ಅಭಿಮಾನವಿದೆ. ಆದರೆ ಅವರು ಕುಟುಂಬ ರಾಜಕಾರಣಕ್ಕೆ ಬಲಿಯಾಗುತ್ತಿದ್ದಾರಲ್ಲಾ ಎಂದು ಕೊರಗು ಇದೆ. ಏಕೆಂದರೆ ಅವರು ಇಂದು ನಾಲಿಗೆ ಇಲ್ಲದ ನಾಯಕರೂ ಆಗಿದ್ದಾರೆ. ಅವರು ಕರೆದು ಮಾತನಾಡಿದರೆ ಮಾತನಾಡುತ್ತೇವೆ, ನಾವು ಸದ್ಯ ಪರಿಸ್ಥಿತಿಯಲ್ಲಿ ಶಿಶುಗಳಂತಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್‍ನಲ್ಲಿ ಬಿಜೆಪಿ ಹಾಳು
ಕಾಂಗ್ರೆಸ್, ಜನತಾದಳದ ರೀತಿಯಲ್ಲಿಯೇ ಬಿಜೆಪಿಯೂ ಸಹ ಸನ್ ಸ್ಟ್ರೋಕ್ ಮತ್ತು ಫ್ಯಾಮಿಲಿ ಸ್ಟ್ರೋಕ್ ನಲ್ಲಿ ಹಾಳಾಗುತ್ತಿದೆ. ಈಗ ನಡೆಯುತ್ತಿರುವುದು ಸನ್ ಸ್ಟ್ರೋಕ್, ಈ ಸನ್ ಸ್ಟ್ರೋಕ್‍ಗೆ ಹಿಂದೆ ಜನತಾ ಪರಿವಾರ ಮುಳುಗಿತು. ಕಾಂಗ್ರೆಸ್ ಸಹ ಸನ್ ಸ್ಟ್ರೋಕ್ ನಲ್ಲಿ ಹಾಳಾಗಿ ಹೋಗಿದೆ. ಇದೀಗ ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್ ನಲ್ಲಿ ಬಿಜೆಪಿ ಹಾಳಾಗುತ್ತಿದೆ.
ಯಾರ ಮುಲಾಜು, ಯಾರ ಭಿಕ್ಷೆಯಿಂದ ಸಿಎಂ ಸ್ಥಾನದಲ್ಲಿ ಕುಳಿತಿದ್ದಿರಾ ಯೋಚಿಸಿ ಎಂದು ಪ್ರಶ್ನಿಸಿದರು.
ಭ್ರಷ್ಟನಿಗೆ ಮಂತ್ರಿ ಸ್ಥಾನ:
ಸಂಪುಟ ವಿಸ್ತರಣೆ, ಪುನರ್ ರಚನೆ ಸಿಎಂ ಪರಮಾಧಿಕಾರ. ಹಲವು ಒತ್ತಾಯಗಳು ಬರುವುದು ಸಹಜ. ಆದರೆ ಆದ್ರೆ ಭ್ರಷ್ಟರನ್ನು ಮಂತ್ರಿ ಮಾಡುವ ಒತ್ತಾಯ ಸಾಮಾನ್ಯವಾಗಿ ಬರುವುದಿಲ್ಲ. ಭ್ರಷ್ಟನನ್ನು, ದಲ್ಲಾಳಿಯನ್ನು ಮಂತ್ರಿ ಮಾಡಿರುವುದು ಹುಬ್ಬೇರಿಸುವಂತೆ ಮಾಡಿದೆ ಎಂದರು
ಮೇಗಾ ಸಿಟಿ ಕರ್ಮಕಾಂಡ:
ಯೋಗೇಶ್ವರ್ ಭ್ರಷ್ಟಾಚಾರವನ್ನು ಹೊತ್ತು ಮಲಗಿದ್ದಾನೆ. 9,731 ಜನರ ಬಳಿ ಮೆಗಾ ಸಿಟಿಗೆ ನೂರಾರು ಕೋಟಿ ದುಡ್ಡು ತೆಗೆದುಕೊಂಡಿದ್ದಾನೆ. ಭ್ರಷ್ಟನ ವಿರುದ್ಧ ಮೋಸ ಹೋದವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನ್ಯಾಯಾಲಯ ಸಿರಿಯಸ್ ಫ್ರಾಡ್ ಇನ್ವೆಸ್ಟಿಗೇಷನ್ ಗೆ ರೆಫರ್ ಮಾಡಿದೆ. ಸಾವಿರಾರು ಜನರಿಗೆ ಟೋಪಿ ಹಾಕಿದವನಿಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇಷ್ಟೆಲ್ಲಾ ಮಾಡಿರುವ ಆತನಿಗೆ ನಿನ್ನೆ ಬಾಯಿ ತಪ್ಪಿ ಸೈನಿಕ ಎಂದೆ ಹಾಗೆ ಕರೆದರೆ ಅದು ನಿಜವಾದ ಸೈನಿಕನಿಗೂ ಅವಮಾನ ಎಂದು ಯೋಗೇಶ್ವರ್ ವಿರುದ್ಧ ಗುಡುಗಿದರು.
ಹುಸಿಯಾದ ನಂಬಿಕೆ :
ಯಡಿಯೂರಪ್ಪನವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದೆವು. ಬಿಎಸ್‍ವೈರವರಿಗೆ ಒಳ್ಳೆಯದಾಗಲಿ ಎಂದು 17 ಜನ ಕ್ಷಿಪ್ರ ಕ್ರಾಂತಿಗೆ ಬಂದಿದ್ದೇವು. ಆದರೆ ಸಂಪುಟದಿಂದ ದಲಿತ ನಾಗೇಶ್ ರನ್ನು ಕಿತ್ತು ಹಾಕಿದ್ದಿರಾ, ಹಿಂದುಳಿದ ವರ್ಗದ ಮುನಿರತ್ನನಿಗೆ ಅವಕಾಶ ನೀಡಿಲ್ಲ ಎಂದು ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ