ನಿವೃತ್ತ ಭಾರತೀಯ ಕಂದಾಯ ಅಧಿಕಾರಿ, ಮಂಡ್ಯದ ಸೊಸೆ ಡಾ. ಲಕ್ಷ್ಮೀ ಅಶ್ವಿನ್ ಗೌಡ ಜೆಡಿಎಸ್ ಗೆ ಗುಡ್ ಬೈ ಹೇಳಿ, ಇಂದು ( ಜ. 16) ಬಿಜೆಪಿಗೆ ಸೇರಲಿದ್ದಾರೆ. ಈ ಮೂಲಕ ರಾಜಕೀಯದ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
ಕಳೆದ ಚುನಾವಣೆಯ ವೇಳೆಯಲ್ಲಿ ನಾಗಮಂಗಲದಲ್ಲಿ ಜೆಡಿಎಸ್ ಸೇರಿದ್ದರು. ಆ ವೇಳೆ ಜೆಡಿಎಸ್ ನಿಂದ ಟಿಕೆಟ್ ವಂಚಿತರಾದರು. ನಂತರ ದಳಪತಿಗಳು ಡಾ ಲಕ್ಷ್ಮೀ ಅವರನ್ನು ಎಂಎಲ್ ಸಿ ಮಾಡುವ ಭರವಸೆ ನೀಡಿ ಸಮಾಧಾನ ಮಾಡಿದರು. ಈ ಭರವಸೆ ಕೂಡಾ ಹುಸಿಯಾದ ಮೇಲೆ ಲಕ್ಷ್ಮೀ ಜೆಡಿಎಸ್ ನಿಂದ ದೂರವಾದರು.
ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಹೆಚ್ಚು ಸಕ್ರಿಯವಾಗಿ ಇರಲು ಬಯಸಿರುವ ಹಿನ್ನೆಲೆಯಲ್ಲಿ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರಲಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.